ಮಡಿಕೇರಿ, ಡಿ. ೧೪: ಸರ್ಕಾರವು ೨೦೨೨-೨೩ ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಖರೀದಿಗೆ ಮುಂದಾಗಿದ್ದು, ತಾ. ೧೫ ರಿಂದ (ಇಂದಿನಿAದ) ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲಿ ನಡೆದ ಕನಿಷ್ಟ ಬೆಂಬಲ ಬೆಲೆ ಯೋಜನೆಯ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿ ಆಗಿ ನೇಮಕ ಮಾಡಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ತಾ. ೧೫ ರಿಂದ ರೈತರ ನೋಂದಣಿ ಕಾರ್ಯ ಆರಂಭವಾಗಲಿದ್ದು, ಜನವರಿ ೧ ರಿಂದ ಮಾರ್ಚ್ ೩೧ ರವರೆಗೆ ಭತ್ತ, ರಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದರು.
ಪ್ರತಿ ಎಕರೆಗೆ ೨೫ ಕ್ವಿಂಟಾಲ್ನAತೆ ಒಬ್ಬ ಬೆಳಗಾರರಿಂದ ಗರಿಷ್ಠ ೪೦ ಕ್ವಿಂಟಾಲ್ ಭತ್ತ ಹಾಗೂ ರಾಗಿ ಕನಿಷ್ಟ ೧೦ ರಿಂದ ಗರಿಷ್ಟ ೨೦ ಕ್ವಿಂಟಾಲ್ ಖರೀದಿಸಲಾಗುತ್ತದೆ. ಸರ್ಕಾರ ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್ಗೆ ೨೦೪೦ ರೂ. ನಿಗದಿಪಡಿಸಲಾಗಿದ್ದು, ರಾಗಿ ಪ್ರತಿ ಕ್ವಿಂಟಾಲ್ಗೆ ೩೫೭೮ ರೂ. ನಿಗದಿಪಡಿಸಿದೆ ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಮಾಹಿತಿ ನೀಡಿದರು.
ಜಿಲ್ಲೆಯಾದ್ಯಂತ ರೈತರಿಗೆ ಅನುಕೂಲ ಆಗುವಂತೆ ೦೪ ಕಡೆಗಳಲ್ಲಿ ಮಡಿಕೇರಿ ಎಪಿಎಂಸಿ ಆವರಣ, ಕುಶಾಲನಗರ ಎಪಿಎಂಸಿ ಆವರಣ, ಗೋಣಿಕೊಪ್ಪ ಎಪಿಎಂಸಿ ಆವರಣ ಹಾಗೂ ಸೋಮವಾರಪೇಟೆ ಎಪಿಎಂಸಿ ಮಾರ್ಕೆಟ್ ಆವರಣದಲ್ಲಿ ನೋಂದಣಿ ಪ್ರಕ್ರಿಯೆ ನಡೆಯಲಿದೆ. ಸೂಕ್ತ ದಾಸ್ತಾನಿಗಾಗಿ ಭತ್ತ ಖರೀದಿ ಕೇಂದ್ರಗಳಲ್ಲಿ ಭತ್ತದ ಗುಣಮಟ್ಟವನ್ನು ಪರೀಕ್ಷಿಸಲು ಗ್ರೇಡರ್ಗಳನ್ನು ನಿಯೋಜಿಸುವಂತೆ ಹಾಗೂ ಖರೀದಿಸಿದ ಭತ್ತವನ್ನು ಸೂಕ್ತ ರೀತಿಯಲ್ಲಿ ದಾಸ್ತಾನು ಮಾಡಲು ಅಗತ್ಯವಿರುವ ದಾಸ್ತಾನು ಕೇಂದ್ರ ಗುರುತಿಸುವಂತೆ ಸೂಚಿಸಿದರು.
ಭತ್ತವನ್ನು ಮಾರಾಟ ಮಾಡಬೇಕಾದ ರೈತರು ಈಗಾಗಲೇ ‘ಪ್ರೂಟ್ಸ್’ ತಂತ್ರಾAಶದಲ್ಲಿ ನೋಂದಣಿಯಾಗಿರಬೇಕು. ಒಂದು ವೇಳೆ ರೈತರು ನೋಂದಣಿ ಮಾಡದಿದ್ದಲ್ಲಿ, ಪ್ರೂಟ್ಸ್ ತಂತ್ರಾAಶದಲ್ಲಿ ನೋಂದಣಿ ಮಾಡಿಕೊಂಡು, ತಾವು ಬೆಳದ ಭತ್ತವನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ ಎಂದರು. ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ ಇಲಾಖೆಯ ಜಂಟಿ ನಿರ್ದೇಶಕ ಕುಮುದಾ ಶರತ್ ಮಾತನಾಡಿ ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ನೋಂದಣಿ ಕೇಂದ್ರದಲ್ಲಿ ರೈತರು ಪ್ರೂಟ್ಸ್ ಐಡಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಎನ್ಪಿಸಿಐ ಬ್ಯಾಂಕ್ ಖಾತೆಯ ವಿವರ ನೀಡಬೇಕಿದೆ ಎಂದು ತಿಳಿಸಿದರು.
ತಹಶೀಲ್ದಾರ್ ಪಿ.ಎಸ್.ಮಹೇಶ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ನಾರಾಯಣ ರೆಡ್ಡಿ, ಕರ್ನಾಟಕ ಕೃಷಿ ಮಾರಾಟ ಅಧ್ಯಯನ ಸಂಸ್ಥೆಯ ಪ್ರಾಂಶುಪಾಲೆ ಎಂ. ವಾಣಿಶ್ರೀ, ಸಹಾಯಕ ಪ್ರಧಾನ ವ್ಯವಸ್ಥಾಪಕ ಕೆ.ಪಿ. ಸೋಮಯ್ಯ, ಉಗ್ರಾಣ ನಿಗಮದ ಅಧಿಕಾರಿ ಎಚ್.ಎಂ. ನಾಗನಾಯ್ಕ, ಆಹಾರ ಇಲಾಖೆಯ ಶಿರಸ್ತೇದಾರರು ಇತರರು ಭತ್ತ ಹಾಗೂ ರಾಗಿ ಖರೀದಿ ಬಗ್ಗೆ ಮಾಹಿತಿ ನೀಡಿದರು.