ಶನಿವಾರಸಂತೆ, ಡಿ. ೧೪: ಸಮೀಪದ ಗುಡುಗಳಲೆ ಜಾತ್ರಾ ಮೈದಾನದ ಕಾಳಿಕಾಂಬ ದೇವಾಲಯದಲ್ಲಿ ವಿಶ್ವಕರ್ಮ ಸಮಾಜದ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗಣಪತಿ ಹೋಮ ಶ್ರದ್ಧಾಭಕ್ತಿಯಿಂದ ನೆರವೇರಿತು.

ಅರ್ಚಕ ಶರತ್ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ನಡೆದವು. ಭಜನಾ ಮಂಡಳಿಯವರು ಭಜನಾ ಕಾರ್ಯಕ್ರಮ ನೀಡಿದರು. ನೂರಾರು ಮಂದಿ ಭಕ್ತರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡಿದ್ದು, ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ದೇವಾಲಯ ಕಾರ್ಯಕಾರಿ ಮಂಡಳಿ ಅಧ್ಯಕ್ಷ ಬಿ.ಬಿ. ನಾಗರಾಜ್, ನಿರ್ದೇಶಕರು, ಸದಸ್ಯರು ಹಾಜರಿದ್ದರು.