ಶನಿವಾರಸಂತೆ, ಡಿ. ೧೫: ಸಮೀಪದ ಕೊಡ್ಲಿಪೇಟೆ ವಿದ್ಯಾಸಂಸ್ಥೆಯಲ್ಲಿ ರಾಜ್ಯಸಭಾ ಸದಸ್ಯ ಕೆ.ಸಿ. ರಾಮಮೂರ್ತಿ ಅವರ ಸಂಸದರ ನಿಧಿಯಡಿ ನಿರ್ಮಿಸಲಾದ ಹೈಟೆಕ್ ಶೌಚಾಲಯವನ್ನು ಹೈಕೋರ್ಟ್ ಹಿರಿಯ ವಕೀಲ ಹಾಗೂ ಸಂಸ್ಥೆ ಅಧ್ಯಕ್ಷ ಹೆಚ್.ಎಸ್. ಚಂದ್ರಮೌಳಿ ಉದ್ಘಾಟಿಸಿದರು.

ನಂತರ ಅವರು ಮಾತನಾಡಿ, ಸಂಸದ ರಾಮಮೂರ್ತಿಯವರು ವಿದ್ಯಾಸಂಸ್ಥೆಗೆ ಆಗಮಿಸಿದ್ದ ಸಂದರ್ಭ ಸಂಸದರ ನಿಧಿಯಡಿ ರೂ. ೧೫ ಲಕ್ಷ ಅನುದಾನ ನೀಡಿದ್ದರು. ಅದನ್ನು ನಿರ್ಮಿತಿ ಕೇಂದ್ರದ ಮೂಲಕ ಗುಣಮಟ್ಟದ ಕಾಮಗಾರಿ ನಡೆಸಿ, ಉತ್ತಮ ಸೌಲಭ್ಯಗಳಿರುವ ಶೌಚಾಲಯ ನಿರ್ಮಿಸಲಾಗಿದೆ ಎಂದರು.

ಸAಸ್ಥೆಯ ಗೌರವಾಧ್ಯಕ್ಷ ಎಸ್.ಎಸ್. ನಾಗರಾಜ್, ಉಪಾಧ್ಯಕ್ಷ ಸಿ.ವಿ. ಶಂಭುಲಿAಗಪ್ಪ, ಖಜಾಂಚಿ ಡಾ. ಉದಯಕುಮಾರ್, ನಿರ್ದೇಶಕರಾದ ಯು.ವಿ. ಶಿವಪ್ರಸಾದ್, ಡಿ.ವಿ. ಹರೀಶ್, ಬಿ.ಕೆ. ಯತೀಶ್, ಪಿಯು ಕಾಲೇಜು ಪ್ರಾಂಶುಪಾಲ ಜಗದೀಶ್ ಬಾಬು, ಪದವಿ ಕಾಲೇಜು ಪ್ರಾಂಶುಪಾಲ ನಿರಂಜನ್, ಉಪನ್ಯಾಸಕರು, ಸಿಬ್ಬಂದಿ ಹಾಜರಿದ್ದರು.