ಮಡಿಕೇರಿ, ಡಿ. ೧೪: ರಾಷ್ಟಿçÃಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕು (ನಬಾರ್ಡ್) ವತಿಯಿಂದ ೨೦೨೩-೨೪ ನೇ ಸಾಲಿಗೆ ೬೯೬೦.೭೩ ಕೋಟಿ ರೂ. ಸಾಮರ್ಥ್ಯ ಆಧಾರಿತ ಸಾಲ ಯೋಜನೆಯನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ ಬಿಡುಗಡೆ ಮಾಡಿದರು.

ನಗರದ ಲೀಡ್ ಬ್ಯಾಂಕ್ ಸಭಾಂಗಣದಲ್ಲಿ ಸಾಮರ್ಥ್ಯ ಆಧಾರಿತ ಸಾಲ ಯೋಜನೆ ಬಿಡುಗಡೆ, ಜೊತೆಗೆ ಬ್ಯಾಂಕುಗಳ ತ್ರೈಮಾಸಿಕ ಪ್ರಗತಿ ಸಭೆ ನಡೆಸಿದರು.

ಮುಂದಿನ (೨೦೨೩-೨೪) ಸಾಲಿಗೆ ಆದ್ಯತಾ ಕ್ಷೇತ್ರಗಳಾದ ಕೃಷಿ, ಸಣ್ಣ ಉದ್ಯಮ, ಶಿಕ್ಷಣ, ವಸತಿ ಮತ್ತಿತರ ಮೂಲ ಸೌಲಭ್ಯ ಸೇರಿದಂತೆ ಹಲವು ಕ್ಷೇತ್ರಕ್ಕೆ ಸಾಮರ್ಥ್ಯ ಆಧಾರಿತ ಸಾಲ ಯೋಜನೆ ನೀಡಲಾಗಿದ್ದು, ಇವುಗಳನ್ನು ಅರ್ಹರಿಗೆ ತಲುಪಿಸಲಾಗುತ್ತದೆ ಎಂದು ರಾಷ್ಟಿçÃಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ ಜಿಲ್ಲಾ ವ್ಯವಸ್ಥಾಪಕರಾದ ವಿ.ರಮೇಶ್ ಬಾಬು ಅವರು ತಿಳಿಸಿದರು.

ಕೃಷಿ, ಪಶುಪಾಲನೆ, ಮೀನುಗಾರಿಕೆ, ತೋಟಗಾರಿಕೆ, ಸಣ್ಣ ಕೈಗಾರಿಕೆ ಮತ್ತು ಉದ್ಯಮಕ್ಕೆ ಹೆಚ್ಚಿನ ಅವಕಾಶವನ್ನು ನೀಡಲಾಗಿದೆ.

(ಮೊದಲ ಪುಟದಿಂದ) ಕೃಷಿ ಮೂಲ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕೃಷಿ ಮಾರುಕಟ್ಟೆ ಮೂಲ ಸೌಕರ್ಯಕ್ಕೆ ಒತ್ತು ನೀಡಲಾಗಿದೆ. ಪ್ರಧಾನಮಂತ್ರಿ ಆಹಾರ ಸಂಸ್ಕರಣಾ ಉದ್ದಿಮೆ ಯೋಜನೆಯಡಿ ಸ್ವಸಹಾಯ ಗುಂಪುಗಳಿಗೆ ಹೆಚ್ಚಿನ ಸಾಲ ಸೌಲಭ್ಯ ದೊರೆಯಲಿದೆ. ಆತ್ಮನಿರ್ಭರ ಭಾರತ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ. ಪ್ರಧಾನಮಂತ್ರಿ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ಭಾರತೀಯ ರಿಸರ್ವ್ ಬ್ಯಾಂಕಿನ ಜೀವಿಕಾ ಅವರು ವರ್ಚುವಲ್ ಮೂಲಕ ಮಾಹಿತಿ ನೀಡಿ ಬ್ಯಾಂಕುಗಳು ಕೃಷಿಕರಿಗೆ ಒಳಿತು ಮಾಡುವಲ್ಲಿ ಶ್ರಮಿಸಬೇಕು ಎಂದರು. ಯೂನಿಯನ್ ಬ್ಯಾಂಕ್‌ನ ಪ್ರಾದೇಶಿಕ ವ್ಯವಸ್ಥಾಪಕ ಅನಂತ್ ಕೆ.ಎಸ್. ಮಾತನಾಡಿ, ಸರ್ಕಾರ ರೈತರಿಗೆ ಹಲವು ಕಾರ್ಯಕ್ರಮ ಅನುಷ್ಠಾನಗೊಳಿಸಿದೆ ಎಂದರು.

ಜಿಲ್ಲಾ ಅಗ್ರಣಿ ಬ್ಯಾಂಕಿನ ವ್ಯವಸ್ಥಾಪಕ ಶಿವಕುಮಾರ್ ಅವರು ಸಾಮರ್ಥ್ಯ ಆಧಾರಿತ ಸಾಲ ಯೋಜನೆಯು ಜಿಲ್ಲಾ ಆರ್ಥಿಕ ಬೆಳವಣಿಗೆಯ ಮುನ್ನೋಟವಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲೆಯ ವಿವಿಧ ಬ್ಯಾಂಕುಗಳ ಮುಖ್ಯಸ್ಥರು, ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.