ಮಡಿಕೇರಿ, ಡಿ. ೧೫: ನಗರದ ಓಂಕಾರೇಶ್ವರ ದೇವಾಲಯ ರಸ್ತೆಯಲ್ಲಿ ನಿರ್ಮಾಣವಾಗಲಿರುವ ಕೊಡಗು ಜಿಲ್ಲಾ ಬಿಜೆಪಿ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಪ್ರತಿಯೊಬ್ಬ ಕಾರ್ಯಕರ್ತನ ಕೊಡುಗೆಯೂ ಅತ್ಯಗತ್ಯ ಎಂದು ಭಾರತೀಯ ಜನತಾ ಪಾರ್ಟಿಯ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಹೇಳಿದರು.

ನೂತನ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕಾಗಿ ನಡೆದ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಇಂದು ಬಿಜೆಪಿ ಕಾರ್ಯಾಲಯ ಕಟ್ಟಡ ಲೋಕಾರ್ಪಣೆಗೊಂಡಿದೆ. ಕೊಡಗು, ವಿಜಯನಗರ ಹಾಗೂ ಶಿರಸಿಯಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ.

ಜಿಲ್ಲಾ ಬಿಜೆಪಿ ಕಚೇರಿ ಕಟ್ಟಡ ನಿರ್ಮಾಣಕ್ಕೆ ಕೊಡಗಿನ ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತ ತನ್ನಿಂದಾದ ನೆರವನ್ನು ನೀಡಬೇಕು. ಹಾಗಾದಾಗ ಮಾತ್ರ ಬಿಜೆಪಿ ಕಾರ್ಯಾಲಯ ನಮ್ಮೆಲ್ಲರಿಗೂ ಸೇರಿದ್ದು ಎಂಬ ಭಾವನೆ ಮೂಡಲು ಸಾಧ್ಯವಾಗುತ್ತದೆ. ನೂತನವಾಗಿ ತಲೆ ಎತ್ತಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಜನರ ನೋವು ನಲಿವುಗಳಿಗೆ ಸ್ಪಂದನ ಸಿಗುವಂತಾಗಬೇಕು ಎಂದು ರಾಜೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ

(ಮೊದಲ ಪುಟದಿಂದ) ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನೂತನ ಕಾರ್ಯಾಲಯ ಕಟ್ಟಡ ನಿರ್ಮಾಣ ದಲ್ಲಿ ಪ್ರತಿಯೊಬ್ಬ ಕಾರ್ಯಕರ್ತನ ಪಾಲುದಾರಿಕೆ ಇರಬೇಕು. ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗುವುದಾಗಿ ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಬಿ.ಬಿ. ಭಾರತೀಶ್, ೪ ಅಂತಸ್ತಿನ ಬಿಜೆಪಿ ಕಾರ್ಯಾಲಯ ಕಟ್ಟಡ ನಿರ್ಮಾಣವನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸರ್ವರ ಸಹಕಾರ ಅಗತ್ಯ ಎಂದು ಹೇಳಿದರು.

ವೇದಿಕೆಯಲ್ಲಿ ಶಾಸಕ ಅಪ್ಪಚ್ಚು ರಂಜನ್, ಬಿಜೆಪಿ ಹಿರಿಯ ಮುಖಂಡ ಡಾ. ಮನೋಹರ್ ಜಿ. ಪಾಟ್ಕರ್, ಬಿಜೆಪಿಯ ಮಂಗಳೂರು ವಿಭಾಗ ಪ್ರಭಾರಿ ಉದಯಕುಮಾರ್ ಶೆಟ್ಟಿ, ಜೀವವೈವಿಧ್ಯ ಮಂಡಳಿ ಅಧ್ಯಕ್ಷ ರವಿ ಕಾಳಪ್ಪ ಉಪಸ್ಥಿತರಿದ್ದರು.

೨ ಕೋಟಿ ವೆಚ್ಚದ ಜಿಲ್ಲಾ ಬಿಜೆಪಿ ನೂತನ ಕಟ್ಟಡ ನಿರ್ಮಾಣಕ್ಕೆ ವಿವಿಧ ಪೂಜಾ ಕೈಂಕರ್ಯಗಳ ಬಳಿಕ ಬಿಜೆಪಿ ರಾಷ್ಟಿçÃಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭ ಪಶ್ಚಿಮ ಘಟ್ಟ ಸಂರಕ್ಷಣಾ ಕಾರ್ಯಪಡೆ ಮಾಜಿ ಅಧ್ಯಕ್ಷ ರವಿ ಕುಶಾಲಪ್ಪ, ಮಾಜಿ ವಿಧಾನ ಪರಿಷತ್ ಸದಸ್ಯರುಗಳಾದ ಸುನಿಲ್ ಸುಬ್ರಮಣಿ, ಎಸ್.ಜಿ. ಮೇದಪ್ಪ, ಜಿ.ಪಂ. ಮಾಜಿ ಅಧ್ಯಕ್ಷ ಹರೀಶ್, ಬಿಜೆಪಿ ಪ್ರಮುಖರಾದ ಕೋಡಿ ಪೊನ್ನಪ್ಪ, ಎಂ.ಬಿ. ದೇವಯ್ಯ, ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಉಪಾಧ್ಯಕ್ಷೆ ಸವಿತಾ ರಾಕೇಶ್, ಬಿಜೆಪಿ ವಕ್ತಾರ ಮಹೇಶ್ ಜೈನಿ, ಮೂಡಾ ಮಾಜಿ ಅಧ್ಯಕ್ಷ ರಮೇಶ್ ಹೊಳ್ಳಾ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ದರ್ಶನ್ ಜೋಯಪ್ಪ, ಶಿಸ್ತು ಸಮಿತಿ ಪದಾಧಿಕಾರಿ ರೀನಾ ಪ್ರಕಾಶ್, ರೈತ ಮೋರ್ಚಾ ಉಪಾಧ್ಯಕ್ಷೆ ಯಮುನಾ ಚಂಗಪ್ಪ, ವೀರಾಜಪೇಟೆ ತಾಲೂಕು ವಕ್ತಾರ ಅಜಿತ್ ಕರುಂಬಯ್ಯ ಮತ್ತಿತರರು ಪಾಲ್ಗೊಂಡಿದ್ದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಭೀಮಯ್ಯ ನಿರೂಪಿಸಿ, ಮಾದಪ್ಪ ಸ್ವಾಗತಿಸಿದರು. ಸತೀಶ್ ವಂದಿಸಿದರು.