ಮಡಿಕೇರಿ, ಡಿ. ೧೬: ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಂಬೂರು ಪುನರ್ವಸತಿ ಬಡಾವಣೆಯ ನಿವಾಸಿಗಳು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಎಂ. ಪಿ. ಅಪ್ಪಚ್ಚು ರಂಜನ್ ಭರವಸೆ ನೀಡಿದರು.
ಮಾದಾಪುರ ಹೊಳೆಯಿಂದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ರೂ. ೨.೫೦ ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಭವಿಷ್ಯದಲ್ಲಿ ಈ ಯೋಜನೆಯ ಲಾಭ ಪಡೆಯಲು ೬೦೦ ಕ್ಕೂ ಹೆಚ್ಚಿನ ಕುಟುಂಬಗಳು ಅರ್ಹತೆಯೊಂದಿಗೆ ನಿತ್ಯ ೩೦೦೦ ಮಂದಿಗೆ ಉಪಯೋಗ ಆಗಲಿದೆ ಎಂದು ಅವರು ಹೇಳಿದರು. ಈಗಾಗಲೇ ಸರ್ಕಾರ ಸಂತ್ರಸ್ತರಿಗೆ ಮನೆ ಹಸ್ತಾಂತರ ಮಾಡುವ ಮೂಲಕ ಸಾಕಷ್ಟು ಅನುಕೂಲತೆ ಒದಗಿಸಿದೆ. ಈಗ ಕುಡಿಯುವ ನೀರಿನ ಯೋಜನೆ ಜಾರಿಗೆ ತಂದಿದೆ. ಇಲ್ಲಿ ಕೊಳವೆಬಾವಿ ಕೊರೆದು ನೀರು ಸರಬರಾಜು ಮಾಡುವ ಯೋಜನೆ ಇದೆಯಾದರೂ ಸಮರ್ಪಕ ನೀರು ಲಭಿಸದೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕರು ನೆನಪಿಸಿದರು.
ಈ ಬಡಾವಣೆಯ ನಿವಾಸಿಗಳು ಬೇರೆ ಬೇರೆ ಕಡೆಗಳಿಂದ ಬಂದು ಸೌಲಭ್ಯ ಪಡೆದಿದ್ದು ಎಲ್ಲರೂ ಹೊಂದಿಕೊAಡು ಸಾಮರಸ್ಯ ಜೀವನ ನಡೆಸಲು ಸಲಹೆ ನೀಡಿದರು. ಈ ಪರಿಸರದಲ್ಲಿ ಎಲ್ಲರ ಅನೂಕೂಲತೆ ಗಾಗಿ ಸುಸಜ್ಜಿತ ಸಮುದಾಯ ಭವನ ಹಾಗೂ ವಾಣಿಜ್ಯ ಮಳಿಗೆ ನಿರ್ಮಾಣ ಕಾಮಗಾರಿ ಕೂಡ ನಡೆಯಲಿದ್ದು ಎಲ್ಲವನ್ನೂ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಮೂಹ ಜನವಸತಿ ಪ್ರದೇಶದಲ್ಲಿ ತಾವು ಸ್ವಯಂ ಪ್ರೇರಣೆಯಿಂದ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದರಲ್ಲದೆ ಈ ಭಾಗದಲ್ಲಿ ಕಾನೂನು ಸುವ್ಯವಸ್ಥೆಗೆ ಒತ್ತು ನೀಡಬೇಕು ಎಂದರು. ಅಲ್ಲದೆ ಕಾಮಗಾರಿ ಪೂರ್ಣಗೊಳಿಸಲು ತ್ವರಿತವಾಗಿ ಗಮನಹರಿಸಬೇಕು ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂಜಿನಿಯರಿAಗ್ ವಿಭಾಗದ ವೀರೇಂದ್ರ ಕುಮಾರ್ ಹಾಗೂ ಗ್ರಾಮ ಪಂಚಾಯ್ತಿ ಪ್ರಮುಖರು, ಬಿಜೆಪಿ ಪದಾಧಿಕಾರಿಗಳು ಹಾಗೂ ಬಡಾವಣೆ ನಿವಾಸಿಗಳು ಹಾಜರಿದ್ದು ಸಮಸ್ಯೆ ಬಗೆಹರಿಸಲು ಕಾಳಜಿ ವಹಿಸಿ ಸ್ಪಂದಿಸಿದ ಶಾಸಕ ಅಪ್ಪಚ್ಚುರಂಜನ್ ಅವರಿಗೆ ಅಭಿನಂದನೆ ಸಲ್ಲಿಸಿದರು.