ಸುಂಟಿಕೊಪ್ಪ, ಡಿ. ೧೬: ಕೊಡಗು ಜಿಲ್ಲಾ ಮಟ್ಟದ ಕ್ರಿಸ್ಮಸ್ ಗೀತಗಾಯನ ಸುಂಟಿಕೊಪ್ಪದ ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ತಾ.೧೮ ರಂದು ಆಯೋಜಿಸಲಾಗಿದೆ. ಎಂದು ಎಸ್.ಎಂ.ಡಿಸಿಲ್ವಾ ತಿಳಿಸಿದ್ದಾರೆ.
ಇದೇ ಪ್ರಥಮ ಬಾರಿಗೆ ಸುಂಟಿಕೊಪ್ಪದಲ್ಲಿ ಕೊಡಗು ಜಿಲ್ಲಾ ಮಟ್ಟದ ಗೀತಾ ಗಾಯನ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ಜಿಲ್ಲೆಯ ವಿವಿಧ ಧರ್ಮ ಕೇಂದ್ರಗಳಿAದ ೨೫ಕ್ಕೂ ಅಧಿಕ ತಂಡಗಳು ನೋಂದಾಯಿಸಿಕೊAಡಿವೆ. ಈ ಕಾರ್ಯಕ್ರಮದಲ್ಲಿ ಮೂರು ವಿಭಾಗಗಳಾಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜು ಮತ್ತು ಹಿರಿಯರ ವಿಭಾಗದಲ್ಲಿ ಗಾಯನ ಸ್ಪರ್ಧೆಯು ನಡೆಯಲಿದೆ. ವಿಜೇತ ತಂಡದವರಿಗೆ ಆಕರ್ಷಕ ಬಹುಮಾನ ನಗದು ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.