ಮಡಿಕೇರಿ, ಡಿ. ೧೫: ರಸ್ತೆ ಅವ್ಯವಸ್ಥೆ ವಿರುದ್ಧ ತಾ. ೨೨ ರಂದು ಮೂರ್ನಾಡಿನಲ್ಲಿ ಜೆಡಿಎಸ್ ವತಿಯಿಂದ ರಸ್ತೆ ತಡೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯ ಎಲ್ಲಾ ರಸ್ತೆಗಳು ಹದಗೆಟ್ಟಿವೆ. ಮಡಿಕೇರಿ ನಗರ ಮತ್ತು ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ಸಂಚಾರ ಅಸಾಧ್ಯವಾಗಿದೆ ಎಂದರು.
ಮೂರ್ನಾಡು, ಹೊದ್ದೂರು, ಕೊಂಡAಗೇರಿ ಸುತ್ತಮುತ್ತಲ ಭಾಗದ ಎಲ್ಲಾ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿದ್ದು, ವಾಹನಗಳ ಸಂಚಾರ ಕಷ್ಟ ಸಾಧ್ಯವಾಗಿದೆ. ಈ ರಸ್ತೆಗಳನ್ನು ದುರಸ್ತಿ ಪಡಿಸುವಂತೆ ಒತ್ತಾಯಿಸಿ ತಾ. ೨೨ ರಂದು ಮೂರ್ನಾಡಿನಲ್ಲಿ ಗ್ರಾಮಸ್ಥರ ಸಹಕಾರದೊಂದಿಗೆ ಜೆಡಿಎಸ್ ರಸ್ತೆ ತಡೆ ಪ್ರತಿಭಟನೆ ನಡೆಸಲಿದೆ.
ಪ್ರತಿಭಟನೆಯ ಸಂದರ್ಭ ಜಿಲ್ಲೆಯ ಎಲ್ಲಾ ರಸ್ತೆಗಳ ದುರಸ್ತಿಗಾಗಿ ಒತ್ತಾಯಿಸಲಾಗುವುದು. ಇದಕ್ಕೆ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಜಿಲ್ಲಾ ವ್ಯಾಪಿ ಎಲ್ಲಾ ಪಂಚಾಯ್ತಿ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಗಣೇಶ್ ಎಚ್ಚರಿಕೆ ನೀಡಿದರು. ಜಿಲ್ಲೆಯ ಶಾಸಕರುಗಳು ರಸ್ತೆ ದುರಸ್ತಿಗೆ ಆಸಕ್ತಿ ತೋರುತ್ತಿಲ್ಲ ಎಂದು ಗಣೇಶ್ ದೂರಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಮಡಿಕೇರಿ ತಾಲೂಕು ಅಧ್ಯಕ್ಷ ಬಲ್ಲಚಂಡ ಗೌತಮ್, ಹಿರಿಯ ಉಪಾಧ್ಯಕ್ಷ ಯೂಸುಫ್ ಕೊಂಡAಗೇರಿ, ಯುವ ಘಟಕದ ಪ್ರಧಾನ ಕಾರ್ಯದರ್ಶಿ ಜಾಶೀರ್ ಹಾಗೂ ಪ್ರಮುಖರಾದ ಮನ್ಸೂರ್ ಉಪಸ್ಥಿತರಿದ್ದರು.