ಸೋಮವಾರಪೇಟೆ, ಡಿ. ೧೬: ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ವೆಂಕಟೇಶ್ವರ ಬಡಾವಣೆಯಲ್ಲಿ ಲೋಕೋಪ ಯೋಗಿ ಇಲಾಖೆ ಮೂಲಕ ನಿರ್ಮಿಸಿರುವ ರೂ. ೯ ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆಯನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿದರು.
ಈ ಸಂದರ್ಭ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು, ಮುಖ್ಯಾಧಿಕಾರಿ ನಾಚಪ್ಪ, ಸದಸ್ಯರುಗಳಾದ ಮೋಹಿನಿ, ಜಯಂತಿ ಶಿವಕುಮಾರ್, ಮೃತ್ಯುಂಜಯ, ಬಿ.ಆರ್. ಮಹೇಶ್, ಶರತ್ಚಂದ್ರ, ಎಸ್. ಮಹೇಶ್, ಎಸ್.ಆರ್. ಸೋಮೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.