ಉಕ್ರೇನ್ ಮೇಲೆ ರಷ್ಯಾ ಕ್ಷಿಪಣಿ ದಾಳಿ

ಕೀವ್, ಡಿ. ೧೬: ಉಕ್ರೇನ್ ಮೇಲೆ ರಷ್ಯಾ ಪ್ರಮುಖ ಕ್ಷಿಪಣಿ ದಾಳಿ ನಡೆಸಿದ್ದು, ಕನಿಷ್ಟ ಮೂರು ನಗರಗಳಲ್ಲಿ ಸ್ಫೋಟ ಸಂಭವಿಸಿದೆ ಎಂದು ಉಕ್ರೇನ್ ಅಧಿಕಾರಿಗಳು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಬರೆದಿರುವ ಸ್ಥಳೀಯ ಅಧಿಕಾರಿಗಳು ರಾಜಧಾನಿ ಕೀವ್, ಬಳಿ ಸ್ಫೋಟ ಸಂಭವಿಸಿರುವುದರ ಬಗ್ಗೆ ವರದಿ ಮಾಡಿದ್ದು, ಕ್ರಿವಿ ರಿಹ್ ಮತ್ತು ಈಶಾನ್ಯ ಖಾರ್ಕಿವ್‌ಗಳಲ್ಲಿ ದಾಳಿ ನಡೆದಿದೆ ಎಂದು ಹೇಳಿದ್ದಾರೆ. ಉಕ್ರೇನ್ ಅಧಿಕಾರಿ ಖಾರ್ಕಿವ್ ಮೇಯರ್ ಇಹೋರ್ ತೆರೆಖೋವ್ ಇಡೀ ನಗರ ವಿದ್ಯುತ್ ಇಲ್ಲದೇ ಕತ್ತಲಲ್ಲಿ ಮುಳುಗಿದೆ ಎಂದು ಹೇಳಿದ್ದಾರೆ. ಖಾರ್ಕಿವ್ ಮೇಯರ್ ಪ್ರಾದೇಶಿಕ ಗೌರ್ನರ್ ಓಲೆಹ್ ಸಿನಿಹುಬೊವ್ ನಗರದ ಪ್ರಮುಖ ಮೂಲಸೌಕರ್ಯಗಳ ಮೇಲೆ ಮೂರು ದಾಳಿಗಳು ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.

ಪುಟಿನ್‌ಗೆ ಮೋದಿ ಸಲಹೆ

ನವದೆಹಲಿ, ಡಿ. ೧೬: ಉಕ್ರೇನ್ ವಿಷಯದಲ್ಲಿ ಮಾತುಕತೆಯೊಂದೇ ಇರುವ ಏಕೈಕ ಮಾರ್ಗ ಎಂದು ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್‌ಗೆ ಕರೆ ನೀಡಿದ್ದಾರೆ. ಈ ಬಗ್ಗೆ ಸರ್ಕಾರ ಹೇಳಿಕೆ ಪ್ರಕಟಿಸಿದ್ದು, ಪ್ರಧಾನಿ ಮೋದಿ - ರಷ್ಯಾ ಅಧ್ಯಕ್ಷ ಪುಟಿನ್ ಇಬ್ಬರೂ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ ಎಂದು ತಿಳಿಸಿದೆ. ಸಮರ್ ಖಂಡ್‌ನಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆ(ಎಸ್‌ಸಿಒ)ನಲ್ಲಿ ಇಬ್ಬರೂ ನಾಯಕರು ದ್ವಿಪಕ್ಷೀಯ ಸಭೆ ನಡೆಸಿ ಇಂಧನ ಸಹಕಾರ, ವಾಣಿಜ್ಯ ವ್ಯಾಪಾರ, ಹೂಡಿಕೆ, ರಕ್ಷಣೆ, ಭದ್ರತಾ ಸಹಕಾರ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಿದ್ದರು. ಈ ಸಭೆಯ ಬಳಿಕ ಈಗ ಉಭಯ ನಾಯಕರು ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ದೂರವಾಣಿ ಕರೆಯಲ್ಲಿ ಪ್ರಧಾನಿ ಮೋದಿ ಭಾರತದ ಅಧ್ಯಕ್ಷತೆಯಲ್ಲಿರುವ ಜಿ-೨೦ಗೆ ಸಂಬAಧಿಸಿದAತೆ ಹಲವು ಮಾಹಿತಿಗಳನ್ನು ಹಂಚಿಕೊAಡಿದ್ದು, ಭಾರತದ ಆದ್ಯತೆಗಳನ್ನು ವಿವರಿಸಿದ್ದಾರೆ.

ಮುರುಘಾ ಶ್ರೀ ವಿರುದ್ಧ ಪ್ರಕರಣ ದಾಖಲಿಸಲು ಕುಮ್ಮಕ್ಕು : ಸೌಭಾಗ್ಯ ಬಸವರಾಜನ್ ಬಂಧನ

ಚಿತ್ರದುರ್ಗ, ಡಿ. ೧೬: ಮುರುಘಾ ಶ್ರೀ ವಿರುದ್ಧ ಪೋಕ್ಸೊ ಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪ ಎದುರಿಸುತ್ತಿರುವ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ, ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ದಾವಣಗೆರೆಯಲ್ಲಿ ವಶಕ್ಕೆ ಪಡೆದಿದ್ದಾರೆ. ಬಸವರಾಜನ್ ಹಾಗೂ ಸೌಭಾಗ್ಯ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ನ.೯ ರಂದು ದೂರು ದಾಖಲಾಗಿದ್ದು, ಮರುದಿನ ಅಂದರೆ ನ.೧೦ ರಂದು ಬಸವರಾಜನ್ ಅವರನ್ನು ಬಂಧಿಸಲಾಗಿತ್ತು. ಆದರೆ, ಸೌಭಾಗ್ಯ ತಲೆ ಮರೆಸಿಕೊಂಡಿದ್ದರು. ದಾವಣಗೆರೆಯಲ್ಲಿ ತಡರಾತ್ರಿ ಸೌಭಾಗ್ಯ ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು ಶುಕ್ರವಾರ ಬಂಧಿಸಿ ವಿಚಾರಣೆ ನಡೆಸಲಿದ್ದಾರೆ. ಸದ್ಯ ಸೌಭಾಗ್ಯ ಅವರನ್ನು ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿದೆ. ಮುರುಘಾ ಶ್ರೀ ವಿರುದ್ಧ ಸುಳ್ಳು ದೂರು ದಾಖಲಿಸಲು ಪಿತೂರಿ ನಡೆಸಲಾಗಿದೆ ಎಂದು ಆರೋಪಿಸಿ ಮುರುಘಾ ಮಠದ ಉಸ್ತುವಾರಿ ಬಸವಪ್ರಭು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಅದರಂತೆ ಈ ಬಂಧನ ನಡೆದಿದೆ. ಬಂಧನ ಭೀತಿ ಎದುರಿಸುತ್ತಿದ್ದ ಸೌಭಾಗ್ಯ, ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಅರ್ಜಿ ವಜಾ ಮಾಡಿತ್ತು. ಇದೇ ಪ್ರಕರಣಕ್ಕೆ ಸಂಬAಧಿಸಿ ಈಗಾಗಲೇ ಸೌಭಾಗ್ಯ ಅವರ ಪತಿ ಎಸ್.ಕೆ. ಬಸವರಾಜನ್, ಶಿಕ್ಷಕ ಬಸವರಾಜೇಂದ್ರ, ಛಾಯಾಚಿತ್ರಗ್ರಾಹಕ ಮಯೂರ ಬಂಧಿತರಾಗಿದ್ದಾರೆ.

ಮಡಿದ ಸೈನಿಕರ ಕುಟುಂಬದವರಿಗೆ ಎಲ್ಲಾ ರೀತಿಯ ಸಹಾಯ - ಸಿಎಂ

ಬೆAಗಳೂರು, ಡಿ. ೧೬: ದೇಶಕ್ಕಾಗಿ ಮಡಿದ ಸೈನಿಕರ ಕುಟುಂಬದವರಿಗೆ ಎಲ್ಲಾ ರೀತಿಯ ಸಹಾಯ, ಸಹಕಾರವನ್ನು ನೀಡಲು ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಅವರು ಇಂದು ರಾಷ್ಟಿçÃಯ ಸೈನಿಕ ಸ್ಮಾರಕ ಮ್ಯಾನೇಜ್ಮೆಂಟ್ ಟ್ರಸ್ಟ್ ಆಯೋಜಿಸಿದ್ದ ಬಾಂಗ್ಲಾದೇಶ ವಿಮೋಚನಾ ದಿನದ ವಿಜಯ ದಿವಸ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಭಾರತ ಸ್ವಾತಂತ್ರ‍್ಯ ಪೂರ್ವ ಹಾಗೂ ನಂತರದಲ್ಲಿ ಬಾಂಗ್ಲಾ ವಿಮೋಚನೆ, ಕಾರ್ಗಿಲ್ ಸೇರಿದಂತೆ ಅನೇಕ ಯುದ್ಧಗಳಲ್ಲಿ ಜಯಗಳಿಸಿದೆ. ಅದರಲ್ಲಿ ಕರ್ನಾಟಕದ ಯೋಧರು ತಮ್ಮ ಪ್ರಾಣ ತ್ಯಾಗ ಮಾಡಿ ಭಾರತಕ್ಕೆ ವಿಜಯ ತಂದುಕೊಟ್ಟಿದ್ದಾರೆ. ಅದರ ಸ್ಮರಣಾರ್ಥವಾಗಿ ವಿಜಯ ದಿವಸ ಆಚರಣೆ ಮಾಡಲಾಗುತ್ತದೆ. ರಕ್ಷಣಾ ಪಡೆಗಳ ಸೇವೆ ಅತ್ಯಂತ ಶ್ರೇಷ್ಠ ಸೇವೆ. ಅಲ್ಲಿಗೆ ಸೇರುವ ಮುನ್ನವೇ ಎಲ್ಲಾ ತ್ಯಾಗಕ್ಕೂ ಸಿದ್ದರಾಗಿರಬೇಕು ಎಂದು ಮನಗಂಡು ಸೇರುತ್ತೇವೆ. ದೇಶದ ರಕ್ಷಣೆ ಹಾಗೂ ಅದರ ಜನರಿಗಾಗಿ ಪ್ರಾಣ ತ್ಯಾಗ ಮಾಡುವ ಮೂಲಕ ದೇಶಕ್ಕೆ ವಿಜಯ ಪ್ರಾಪ್ತಿಯಾಗಿದ್ದನ್ನು ನೋಡಲೂ ಅವರಿರುವುದಿಲ್ಲ. ಮಾನವೀಯತೆಯ ಅತ್ಯಂತ ಶ್ರೇಷ್ಠ ಗುಣವನ್ನು ಹೊಂದಿರುವ ಸೇವೆ ಇದು ಎಂದರು.

ಗ್ರಾಮಗಳಲ್ಲಿ ನ್ಯಾಯಾಲಯಗಳ ಸ್ಥಾಪನೆಗೆ ಸರಕಾರದ ಚಿಂತನೆ

ಬೆAಗಳೂರು, ಡಿ. ೧೬: ರಾಜ್ಯದ ಗ್ರಾಮಗಳಲ್ಲಿ ಹಂತ ಹಂತವಾಗಿ ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ನ್ಯಾಯಾಲಯಗಳನ್ನು ಸ್ಥಾಪಿಸಲು ತೆಗೆದುಕೊಳ್ಳುತ್ತಿರುವ ಕ್ರಮಗಳ ಕುರಿತು ನಿನ್ನೆಯಷ್ಟೇ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳು ಮತ್ತು ಹೈಕೋರ್ಟ್ಗಳಿಂದ ಮಾಹಿತಿ ಕೇಳಿತ್ತು. ನ್ಯಾಯಾಲಯಗಳನ್ನು ಗ್ರಾಮ ಮಟ್ಟಕ್ಕೆ ಕೊಂಡೊಯ್ಯುವುದು ಈ ಉಪಕ್ರಮದ ಉದ್ದೇಶವಾಗಿದೆ. ಈ ಕುರಿತು ಇತ್ತೀಚೆಗೆ ನಡೆದ ಅಖಿಲ ಭಾರತ ಕಾನೂನು ಸಚಿವರ ಸಭೆಯಲ್ಲಿ ಚರ್ಚೆಗಳು ನಡೆದಿದ್ದು, ರಾಜ್ಯವು ಈ ಉಪಕ್ರಮವನ್ನು ಬೆಂಬಲಿಸಿದೆ ಎಂದು ಕರ್ನಾಟಕ ಕಾನೂನು ಸಚಿವ ಜೆ.ಸಿ. ಮಾದುಸ್ವಾಮಿ ಅವರು ಮಾಹಿತಿ ನೀಡಿದ್ದಾರೆ. ರಾಜ್ಯಾದ್ಯಂತ ಅಗತ್ಯವಿರುವ ಕಡೆ ಗ್ರಾಮಗಳಲ್ಲಿ ಹಂತ ಹಂತವಾಗಿ ಗ್ರಾಮ ನ್ಯಾಯಾಲಯಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಯೋಜಿಸುತ್ತಿದೆ ಎಂದು ತಿಳಿಸಿದರು. ಗ್ರಾಮಗಳಲ್ಲಿ ಸ್ಥಳೀಯವಾಗಿ ಸಮಸ್ಯೆಗಳನ್ನು ಬಗೆಹರಿಸುವ ದಕ್ಷರನ್ನು ಗುರುತಿಸುವ ಪ್ರಕ್ರಿಯೆ ಆರಂಭವಾಗಿದೆ. ಕರ್ನಾಟಕವು ನ್ಯಾಯಾಲಯಗಳನ್ನು ಸ್ಥಾಪಿಸಿದ ನಂತರ, ನ್ಯಾಯಾಂಗ ಸೇವೆಯನ್ನು ತಳಮಟ್ಟದವರೆಗೆ ಕೊಂಡೊಯ್ದ ದೇಶದ ಕೆಲವು ರಾಜ್ಯಗಳ ಪಟ್ಟಿಗೆ ಸೇರಲಿದೆ. ಈ ದಿಕ್ಕಿನಲ್ಲಿ ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಕೇರಳ, ಮಹಾರಾಷ್ಟç ಮತ್ತು ಒಡಿಶಾ ರಾಜ್ಯಗಳು ಪ್ರಗತಿ ಸಾಧಿಸಿವೆ ಎಂದು ಮಾಹಿತಿ ನೀಡಿದರು. ಈ ಪ್ರಸ್ತಾವನೆಯನ್ನು ಕಾರ್ಯಗತಗೊಳಿಸುವ ಮಾರ್ಗಗಳ ಕುರಿತು ಚರ್ಚಿಸಲು ಕರ್ನಾಟಕವು ನ್ಯಾಯಮೂರ್ತಿಗಳಾದ ದಿನೇಶ್ ಕುಮಾರ್, ಪ್ರಭಾಕರ ಶಾಸ್ತಿç ಎಸ್. ಅಮರಣ್ಣನವರ್ ಮತ್ತು ಎಸ್. ರಾಚಯ್ಯ ಅವರನ್ನು ಒಳಗೊಂಡ ಹೈಕೋರ್ಟ್ ನ್ಯಾಯಮೂರ್ತಿಗಳ ಸಮಿತಿಯನ್ನು ರಚಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಉದ್ದೇಶಕ್ಕಾಗಿ ಸರ್ಕಾರವೂ ೨೫ ಲಕ್ಷ ರೂಪಾಯಿಯನ್ನು ಮೀಸಲಿಟ್ಟಿದೆ. ಪ್ರತಿ ಹಳ್ಳಿಯಲ್ಲಿ ನ್ಯಾಯಾಂಗ ಅಧಿಕಾರಿಯನ್ನು ನೇಮಿಸುವ ಪ್ರಕ್ರಿಯೆಯು ಇದು ಒಳಗೊಂಡಿರುತ್ತದೆ. ಗ್ರಾಮಗಳಲ್ಲಿ ನ್ಯಾಯಾಲಯಗಳು ಸ್ಥಾಪನೆಗೊಂಡಿದ್ದೇ ಆದರೆ, ಕಾನೂನು ಸಮಸ್ಯೆಗಳಿಗೆ ಇಲ್ಲಿನ ಜನರು ಜಿಲ್ಲೆಯ ದೊಡ್ಡ ಪೀಠಗಳಿಗೆ ಹೋಗಬೇಕಾಗುವುದಿಲ್ಲ.

ವೈದ್ಯಕೀಯ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ

ನವದೆಹಲಿ, ಡಿ. ೧೬: ವೈದ್ಯಕೀಯ ಪ್ರವೇಶ ಪರೀಕ್ಷೆ ಓಇಇಖಿ-Uಉ ಅನ್ನು ಮೇ ೭, ೨೦೨೩ ರಂದು ನಡೆಸಲಾಗುವುದು ಎಂದು ರಾಷ್ಟಿçÃಯ ಪರೀಕ್ಷಾ ಸಂಸ್ಥೆ ತಿಳಿಸಿದೆ. ಸಾಮಾನ್ಯ ವಿಶ್ವವಿದ್ಯಾಲಯದ ಪ್ರವೇಶ ಪರೀಕ್ಷೆಯ ಎರಡನೇ ಆವೃತ್ತಿಯನ್ನು ಮೇ ೨೧ ರಿಂದ ೩೧, ೨೦೨೩ ರವರೆಗೆ ನಡೆಸಲಾಗುವುದು ಎಂದು ಪ್ರಕಟಿಸಿದೆ. ಪರೀಕ್ಷೆಗಳ ವೇಳಾಪಟ್ಟಿಯನ್ನು ಈ ವರ್ಷ ಮುಂಚಿತವಾಗಿ ಘೋಷಿಸಲಾಗಿದೆ ಎಂದು ಹಿರಿಯ ಎನ್‌ಟಿಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.