ಮಡಿಕೇರಿ, ಡಿ.೧೬: ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ ಪ್ರಯುಕ್ತ ಸಂಪಾಜೆ ಹೋಬಳಿಯ ಪೆರಾಜೆ ಗ್ರಾಮ ಪಂಚಾಯಿತಿಗೆ ಒಳಪಡುವ ಕೆ.ಪೆರಾಜೆ ಮತ್ತು ಪಿ.ಪೆರಾಜೆ ಗ್ರಾಮಗಳಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ತಾ. ೧೭ ರಂದು ಬೆಳಿಗ್ಗೆ ೧೦ ಗಂಟೆಗೆ ಪೆರಾಜೆಯ ಅನ್ನಪೂರ್ಣೇಶ್ವರಿ ಸಭಾಂಗಣದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ ಎಂದು ತಾಲೂಕು ತಹಶೀಲ್ದಾರ್ ಪಿ.ಎಸ್. ಮಹೇಶ್ ತಿಳಿಸಿದ್ದಾರೆ.