ಮಡಿಕೇರಿ, ಡಿ. ೧೬: ಮಾದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಂಬೂರುವಿನಲ್ಲಿ ೨೦೧೮ರ ಪ್ರಾಕೃತಿಕ ವಿಕೋಪ ಪರಿಹಾರ ಸಂಬAಧ ಸುಮಾರು ೬೦೦ ಕುಟುಂಬಗಳಿಗೆ ತೋಟಗಾರಿಕೆ ಇಲಾಖೆಯ ಜಾಗದಲ್ಲಿ ಪುನರ್ವಸತಿ ಕಲ್ಪಿಸಲಾಗಿರುವ ಹಿನ್ನೆಲೆಯಲ್ಲಿ ಈ ಇಲಾಖೆಗೆ ಪರ್ಯಾಯ ೧೦೦ ಎಕರೆ ಭೂಮಿ ನೀಡಲಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ. ಪಿ. ಅಪ್ಪಚ್ಚುರಂಜನ್ ತಿಳಿಸಿದ್ದಾರೆ.
ಜಂಬೂರುವಿನಲ್ಲಿ ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು ತೋಟಗಾರಿಕೆ ಇಲಾಖೆಯ ಈ ಜಾಗಕ್ಕೆ ಬದಲೀ ಜಾಗ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು. ಆ ದಿಸೆಯಲ್ಲಿ ಸೋಮವಾರಪೇಟೆ ತಾಲೂಕಿನ ಶಾಂತಳ್ಳಿಯಲ್ಲಿ ಒಂದು ನೂರು ಎಕರೆ ಬದಲೀ ಜಮೀನು ನೀಡಲು ಸರಕಾರ ಸಂಬAಧಪಟ್ಟ ಇಲಾಖೆಯೊಂದಿಗೆ ಅಗತ್ಯ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ ಎಂದು ಹೇಳಿದರು.
ಹೀಗಾಗಿ ಜಂಬೂರುವಿನಲ್ಲಿ ಪುನರ್ವಸತಿ ಹೊಂದಿರುವ ಫಲಾನುಭವಿಗಳು ಅತ್ಯಂತ ಜವಾಬ್ದಾರಿಯಿಂದ ತಮ್ಮ ತಮ್ಮ ಮನೆಗಳಿಗೆ ಮೂಲಭೂತ ಸೌಕರ್ಯಗಳನ್ನು ಹೊಂದಿಕೊAಡು ಮಕ್ಕಳ ಭವಿಷ್ಯ ರೂಪಿಸುವಲ್ಲಿ ಉತ್ತಮ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕಾಳಜಿ ವಹಿಸಬೇಕು ಎಂದು ತಿಳಿ ಹೇಳಿದರು. ತೋಟಗಾರಿಕೆ ಇಲಾಖೆಗೆ ಈ ಸಂಬAಧ ಪರ್ಯಾಯ ಜಮೀನು ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಶಾಸಕರು ಹೇಳಿದರು.