ಮಡಿಕೇರಿ, ಡಿ. ೧೫: ಮಕ್ಕಳಿಗೆ ದಡಾರ ಹಾಗೂ ರುಬೆಲ್ಲಾ ರೋಗ ಹರಡದಂತೆ ಅಗತ್ಯ ಮುನ್ನೆಚ್ಚರ ವಹಿಸಬೇಕು. ಜೊತೆಗೆ ಸೂಕ್ತ ಚಿಕಿತ್ಸೆಯನ್ನು ಮಕ್ಕಳಿಗೆ ಕೊಡಿಸುವಲ್ಲಿ ಮುಂದಾಗಬೇಕು. ಆ ನಿಟ್ಟಿನಲ್ಲಿ ಜಾಗೃತಿ ಮೂಡಿಸುವಂತೆ ವೈದ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಬಾಂಗಣದಲ್ಲಿ ‘ಲಸಿಕಾ ಕಾರ್ಯಪಡೆ ಪೂರ್ವಭಾವಿ ಸಮನ್ವಯ ಸಮಿತಿ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ದಡಾರ ಅಥವಾ ರುಬೆಲ್ಲಾ ರೋಗವು ಮಕ್ಕಳಿಗೆ ಹರಡದಂತೆ ಕಾಲಕಾಲಕ್ಕೆ ಲಸಿಕೆ ಕೊಡಿಸಬೇಕು. ಲಸಿಕೆ ಕೊಡಿಸುವಲ್ಲಿ ಯಾರೂ ಸಹ ಹಿಂಜರಿಯಬಾರದು. ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ಸಲಹೆ ಪಡೆದು ದಡಾರ ಹಾಗೂ ರುಬೆಲ್ಲಾ ರೋಗ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಅವರು ಹೇಳಿದರು.
ಈ ಸಂದರ್ಭ ಮಾತನಾಡಿದ ಆರ್.ಸಿ.ಹೆಚ್. ಅಧಿಕಾರಿ ಡಾ. ಗೋಪಿನಾಥ್ ಅವರು ಮಕ್ಕಳ ಮೈಯಲ್ಲಿ ಕಲೆಗಳು ಅಥವಾ ಗುಳ್ಳೆಗಳು ಕಂಡು ಬಂದಲ್ಲಿ ಹತ್ತಿರದ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಕೊಡಿಸಬೇಕು. ಮಕ್ಕಳಲ್ಲಿ ಅತಿಸಾರ ಬೇಧಿ ಮತ್ತಿತ್ತರ ಕಂಡುಬAದಲ್ಲಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಉಚಿತ ಲಸಿಕೆ ದೊರೆಯುತ್ತಿದ್ದು, ವೈದ್ಯರ ಸಲಹೆಯಂತೆ ಲಸಿಕೆ ಕೊಡಿಸಲು ಮುಂದಾಗಬೇಕು ಎಂದು ಅವರು ಮಾಹಿತಿ ನೀಡಿದರು.
ಜಿಲ್ಲೆಯ ಲೈನ್ಮನೆಗಳು ಹಾಗೂ ಹಾಡಿಗಳಲ್ಲಿ ವಾಸಿಸುವ ಜನರಲ್ಲಿ ಸಾಕ್ಷರತಾ ಪ್ರಮಾಣ ಹೆಚ್ಚಿಸಲು ಮುಂದಾಗಬೇಕು. ಆ ನಿಟ್ಟಿನಲ್ಲಿ ಅರಿವು ಮೂಡಿಸಬೇಕು. ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಕ್ಷಯರೋಗ, ಮಲೇರಿಯ, ಡೆಂಗ್ಯೂ ಚಿಕುನ್ ಗುನ್ಯಾ ಇತರ ಸಾಂಕ್ರಮಿಕ ರೋಗಗಳ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಸೂಚಿಸಿದರು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಆನಂದ್ ಮಾತನಾಡಿ, ಜಿಲ್ಲೆಯಲ್ಲಿ ಲಿಂಗಾನುಪಾತವು ಒಂದು ಸಾವಿರ ಪುರಷರಿಗೆ ೧೦೧೯ ಮಹಿಳೆಯರಿದ್ದಾರೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಮಧುಮೇಹ, ಕ್ಯಾನ್ಸರ್ ಇತರೆ ರೋಗ ನಿಯಂತ್ರಣಕ್ಕೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಜಿ.ಪಂ. ಸಿಇಓ ಡಾ. ಎಸ್. ಆಕಾಶ್ ಮಾತನಾಡಿ, ಮಕ್ಕಳ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು. ಮಾಹಿತಿ ಮತ್ತು ಶಿಕ್ಷಣ ಮೂಲಕ ಅರಿವು ಮೂಡಿಸಬೇಕು ಎಂದು ಅವರು ಸಲಹೆ ಮಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಆರ್. ವೆಂಕಟೇಶ್ ಅವರು ಆರೋಗ್ಯ ಅಭಿಯಾನ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಆರೋಗ್ಯ ಕಾರ್ಯಕ್ರಮ ಸಂಬAಧಿಸಿದAತೆ ಹಾಡಿಗಳು, ಲೈನ್ಮನೆಗಳಲ್ಲಿ ಹಾಗೂ ಇತರೆ ಪ್ರದೇಶಗಳಲ್ಲಿ ಮಾಹಿತಿ ಶಿಕ್ಷಣ ಚಟುವಟಿಕೆ ಹೆಚ್ಚಿಸಲಾಗಿದೆ ಎಂದರು.
ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಪ್ರಗತಿ ಸಂಬAಧಿಸಿದAತೆ ಜಿಲ್ಲಾಧಿಕಾರಿ ಅವರು ಶಾಲಾ-ಕಾಲೇಜುಗಳು, ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಅವರು ಹೇಳಿದರು.
ಮಕ್ಕಳ ತಜ್ಞ ಡಾ. ಕುಶ್ವಂತ್ ಕೋಳಿಬೈಲು ಅವರು ಮಕ್ಕಳ ಆರೋಗ್ಯಕ್ಕೆ ಸಂಬAಧಿಸಿದAತೆ ಮಾಹಿತಿ ನೀಡಿದರು. ತಾಲೂಕು ವೈದ್ಯಾಧಿಕಾರಿಗಳಾದ ಡಾ. ಶ್ರೀನಿವಾಸ್, ಡಾ. ಚೇತನ್, ಡಾ. ಯತಿರಾಜು ಅವರು ‘ಲಸಿಕಾ ಕಾರ್ಯಪಡೆ ಹಾಗೂ ಆರೋಗ್ಯ ಅಭಿಯಾನ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಪದವಿಪೂರ್ವ ಇಲಾಖೆಯ ಉಪ ನಿರ್ದೇಶಕ ಪುಟ್ಟರಾಜು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ರಂಗದಾಮಯ್ಯ, ಬಿಸಿಎಂ ಅಧಿಕಾರಿ ಎನ್. ಮಂಜುನಾಥ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ದಿವಾಕರ ಇತರರು ಇದ್ದರು.