ಗೋಣಿಕೊಪ್ಪಲು, ಡಿ. ೧೫: ರೈತರ ಬ್ಯಾಂಕ್ ಖಾತೆಗಳಿಗೆ ಸರ್ಕಾರದಿಂದ ಬಿಡುಗಡೆಯಾಗಿರುವ ಪರಿಹಾರದ ಹಣವನ್ನು ರೈತರ ಸಾಲಕ್ಕೆ ಕಡಿತಗೊಳಿ ಸಿದ್ದಲ್ಲಿ ಅಂತಹ ಬ್ಯಾಂಕ್‌ಗಳಿಗೆ ರೈತ ಸಂಘದ ವತಿಯಿಂದ ಬೀಗ ಜಡಿದು ಪ್ರತಿಭಟನೆ ಕೈಗೊಳ್ಳಲಾಗುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾ ಘಟಕ ಎಚ್ಚರಿಕೆ ನೀಡಿದೆ.

ಜಿಲ್ಲಾಧÀ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಪದಾಧಿಕಾರಿಗಳ ತುರ್ತು ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ.

ಅತಿವೃಷ್ಟಿಯಿಂದ ನಷ್ಟಕ್ಕೊಳಗಾದ ಬೆಳೆಗಾರರ ನೆರವಿಗಾಗಿ ಭರ ಪರಿಹಾರದ ಹಣವನ್ನು ಕೆಲವು ಬ್ಯಾಂಕ್‌ಗಳು ರೈತರ ಸಾಲಕ್ಕೆ ವಜಾ ಮಾಡಿರುವ ಬಗ್ಗೆ ರೈತರಿಂದ ದೂರುಗಳು ಬಂದಿವೆ.

ರಾಷ್ಟಿçÃಯ ವಿಪತ್ತು ನಿರ್ವಹಣಾ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪರಿಹಾರ ನಿಧಿ ಮತ್ತು ರಾಜ್ಯ ಸರಕಾರದ ಹೆಚ್ಚುವರಿ ನೆರವಿನಿಂದ ಕೊಡಗು ಜಿಲ್ಲೆಯಲ್ಲಿ ಬೆಳೆ ಕಳೆದುಕೊಂಡ ರೈತರಿಗೆ ೨೮,೦೦೦ ದಿಂದ ೫೬.೦೦೦ ವರೆಗೆ ಪರಿಹಾರ ಹಣ ರೈತರ ಖಾತೆಗಳಿಗೆ ಸಂದಾಯವಾಗುತ್ತಿದೆ.

ರೈತರ ಪರಿಹಾರ ಹಣವನ್ನು ಕಡಿತಗೊಳಿಸದಂತೆ ಮನು ಸೋಮಯ್ಯ ಆಗ್ರಹಿಸಿದ್ದಾರೆ.

ಸಭೆಯಲ್ಲಿ ಜಿಲ್ಲಾ ಪ್ರ. ಕಾರ್ಯದರ್ಶಿ ಚೆಟ್ರುಮಾಡ ಸುಜಯ್ ಬೋಪಯ್ಯ, ಕಾರ್ಯದರ್ಶಿ ಅಜ್ಜಮಾಡ ಚಂಗಪ್ಪ, ಸಂಚಾಲಕ ಪುಚ್ಚಿಮಾಡ ಸುಭಾಷ್, ಪ್ರಮುಖರಾದ ಮೇಚಂಡ ಕಿಶ ಮಾಚಯ್ಯ, ಪುಚ್ಚಿಮಾಡ ರಾಯ್ ಮಾದಪ್ಪ, ತಾಣಚ್ಚಿರ ಲೆಹರ್ ಬಿದ್ದಪ್ಪ, ಎಸ್.ಎಸ್. ಸುರೇಶ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.