ಸೋಮವಾರಪೇಟೆ, ಡಿ. ೧೬: ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮಡಿಕೇರಿ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಮಹರ್ಷಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣಕ್ಕೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರು ಶಂಕುಸ್ಥಾಪನೆ ನೆರವೇರಿಸಿದರು.
ರಾಜ್ಯ ಸರ್ಕಾರದಿಂದ ಪಟ್ಟಣ ಪಂಚಾಯಿತಿಗೆ ರೂ. ೨೨ ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ ಸುಸಜ್ಜಿತ ವಾಲ್ಮೀಕಿ ಭವನ ನಿರ್ಮಾಣಕ್ಕೆ ಚಿಂತಿಸಲಾಗಿದೆ ಎಂದು ಶಾಸಕ ರಂಜನ್ ಹೇಳಿದರು.
ಈ ಸಂದರ್ಭ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು, ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಮುಖ್ಯಾಧಿಕಾರಿ ನಾಚಪ್ಪ, ಸದಸ್ಯರುಗಳಾದ ಬಿ.ಆರ್. ಮೃತ್ಯುಂಜಯ, ಬಿ.ಆರ್. ಮಹೇಶ್, ಮೋಹಿನಿ, ಎಸ್. ಮಹೇಶ್, ಶರತ್‌ಚಂದ್ರ, ಪ್ರಮುಖರಾದ ಎ.ಪಿ. ವೀರರಾಜು, ದರ್ಶನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.