ಕೂಡಿಗೆ, ಡಿ. ೧೬: ಶಿರಂಗಾಲ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ ನಡೆಯಿತು.
ಕಾರ್ಯಕ್ರಮದಲ್ಲಿ ಕುಶಾಲನಗರ ಗ್ರಾಮಾಂತರ ಅಪರಾಧ ವಿಭಾಗದ ಠಾಣಾಧಿಕಾರಿ ಭಾರತಿ ಅಪರಾಧ ತಡೆ ಕುರಿತಾದ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.
ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆÀ ಶ್ರೀಲತಾ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಹಾಯಕ ಠಾಣಾಧಿಕಾರಿ ವೆಂಕಟೇಶ್, ಕಾಲೇಜಿನ ಉಪನ್ಯಾಸಕರುಗಳಾದ ನಾಗರಾಜ್, ಕೆ.ಎ. ವೀಣಾ, ಸರೋಜ, ಕಾವ್ಯ, ಗಿರೀಶ್, ರಾಕೇಶ್, ಶೋಭಾ, ಅಕ್ಷತಾ, ಸೇರಿದಂತೆ ಪೊಲೀಸ್ ಸಿಬ್ಬಂದಿ ವರ್ಗದವರು ಹಾಜರಿದ್ದರು.