ಪೆರಾಜೆ, ಡಿ. ೧೬: ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯಿತಿ ಕೊಡಗು ಮತ್ತು ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂWದ ಜಂಟಿ ಆಶ್ರಯದಲ್ಲಿ ಕೊಕ್ಕೋ ಬೆಳೆಯ ಸಮಗ್ರ ನಿರ್ವಹಣೆ ಮತ್ತು ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ ಬಗ್ಗೆ ವಿಚಾರಗೋಷ್ಠಿ ಮತ್ತು ಪ್ರಾತ್ಯಕ್ಷಿಕೆಯು ಪೆರಾಜೆ ಸಹಕಾರ ಸದನದಲ್ಲಿ ನಡೆಯಿತು. ಕಾರ್ಯ ಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರು ಹಾಗೂ ತಾಲೂಕು ಸಾಗುವಳಿ ಸಕ್ರಮೀಕರಣ ಸಮಿತಿ ಅಧ್ಯಕ್ಷ ಶ್ರೀ ನಾಗೇಶ್ ಕುಂದಲ್ಪಾಡಿ ಯವರು ವಹಿಸಿದ್ದರು. ಗ್ರಾಮ ಪಂಚಾಯಿತಿ ಅಧ್ಯಕೆÀ್ಷ ಚಂದ್ರಕಲಾ ಬಾಲಚಂದ್ರ ಬಳ್ಳಡ್ಕ ಅವರು ಕಾರ್ಯ ಕ್ರಮವನ್ನು ಉದ್ಘಾಟಿಸಿದರು. ತೋಟ ಗಾರಿಕಾ ಇಲಾಖೆಯ ಸಹಾಯಕ ನಿರ್ದೇ±ಕ ಮುತ್ತಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕ್ಯಾಂಪ್ಕೋ ಸಂಸ್ಥೆಯ ಸಿಬ್ಬಂದಿ ಚಂದ್ರಶೇಖರ ಕೆ. ಕೊಕ್ಕೋ ಬೆಳೆಯ ಮರ ಸವರುವಿಕೆ (ಪ್ರೂನಿಂಗ್) ಮತ್ತು ಕೊಕ್ಕೋ ಬೆಳೆ ಸಮಗ್ರ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ರೈತರಾದ ಪುರುಷೋತ್ತಮ ನಡುಬೈಲು ಅವರ ತೋಟದಲ್ಲಿ ಪ್ರಾತ್ಯಕ್ಷಿಕೆ ಮೂಲಕ ಸದಸ್ಯರಿಗೆ ತರಬೇತಿಯನ್ನು ನೀಡಿದರು. ನಂತರ ಸಹಾಯಕ ತೋಟಗಾರಿಕಾ ಅಧಿಕಾರಿ ಡಾ. ವಿಜೇತ್ ಅಡಿಕೆ ಎಲೆ ಚುಕ್ಕಿ ರೋಗ ಬಾಲಚಂದ್ರ ಬಳ್ಳಡ್ಕ ಅವರು ಕಾರ್ಯ ಕ್ರಮವನ್ನು ಉದ್ಘಾಟಿಸಿದರು. ತೋಟ ಗಾರಿಕಾ ಇಲಾಖೆಯ ಸಹಾಯಕ ನಿರ್ದೇ±ಕ ಮುತ್ತಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕ್ಯಾಂಪ್ಕೋ ಸಂಸ್ಥೆಯ ಸಿಬ್ಬಂದಿ ಚಂದ್ರಶೇಖರ ಕೆ. ಕೊಕ್ಕೋ ಬೆಳೆಯ ಮರ ಸವರುವಿಕೆ (ಪ್ರೂನಿಂಗ್) ಮತ್ತು ಕೊಕ್ಕೋ ಬೆಳೆ ಸಮಗ್ರ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ರೈತರಾದ ಪುರುಷೋತ್ತಮ ನಡುಬೈಲು ಅವರ ತೋಟದಲ್ಲಿ ಪ್ರಾತ್ಯಕ್ಷಿಕೆ ಮೂಲಕ ಸದಸ್ಯರಿಗೆ ತರಬೇತಿಯನ್ನು ನೀಡಿದರು. ನಂತರ ಸಹಾಯಕ ತೋಟಗಾರಿಕಾ ಅಧಿಕಾರಿ ಡಾ. ವಿಜೇತ್ ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಪ್ರಾರಂಭದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ ಹೆಚ್.ಕೆ. ಪ್ರಾರ್ಥನೆಗೈದು ಕಾರ್ಯಕ್ರಮವನ್ನು ನಿರೂಪಿಸಿದರು. ಸಹಾಯಕ ತೋಟಗಾರಿಕಾ ಅಧಿಕಾರಿ ಡಾ. ವಿಜೇತ್ ಎಸ್. ಸರ್ವರನ್ನು ಸ್ವಾಗತಿಸಿದರು. ಸಭೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಅಶೋಕ ಪಿ.ಎಂ. ಹಾಗೂ ಸಂಸ್ಥೆಯ ನಿರ್ದೇಶಕರುಗಳು, ಗ್ರಾಮ ಪಂಚಾಯಿತಿ ಪೆರಾಜೆಯ ಸದಸ್ಯರು ಉಪಸ್ಥಿತರಿದ್ದರು. ಸಾಮೂಹಿಕ ಸಹಭೋಜನದೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.