ಮಡಿಕೇರಿ, ಡಿ.೧೬: ಕೊಡಗು ಜಿಲ್ಲಾ ಗೃಹರಕ್ಷಕ ದಳದ ವತಿಯಿಂದ ಗೃಹ ರಕ್ಷಕರ ದಿನಾಚರಣೆಯು ತಾ. ೧೯ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಜಿಲ್ಲಾ ಗೃಹರಕ್ಷಕದಳ ಕಚೇರಿ ಆವರಣದಲ್ಲಿ ನಡೆಯಲಿದೆ.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ, ಜಿಲ್ಲಾ ಪೊಲೀಸ್ ಉಪಾಧೀಕ್ಷಕರು ಮತ್ತು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಜಿ.ಎಸ್.ಗಜೇಂದ್ರ ಪ್ರಸಾದ್, ವೀರಾಜಪೇಟೆ ಪೊಲೀಸ್ ಉಪಾಧೀಕ್ಷಕರಾದ ಎನ್.ನಿರಂಜನ್ ರಾಜೇ ಅರಸ್, ಸೋಮವಾರಪೇಟೆ ವಿಭಾಗದ ಪೊಲೀಸ್ ಉಪಾಧೀಕ್ಷಕ ಆರ್.ವಿ.ಗಂಗಾಧರಪ್ಪ ಇತರರು ಪಾಲ್ಗೊಳ್ಳಲಿದ್ದಾರೆ.