ಸೋಮವಾರಪೇಟೆ, ಡಿ. ೧೭: ಇಲ್ಲಿನ ಪುಷ್ಪಗಿರಿ ಜೇಸೀ ಸಂಸ್ಥೆಯ ನೂತನ ಸಾಲಿನ ಅಧ್ಯಕ್ಷರಾಗಿ ಎಂ.ಎ. ರುಬೀನಾ ಅವರು ಅಧಿಕಾರ ಸ್ವೀಕರಿಸಿದರು.

ಸ್ಥಳೀಯ ಸಂಕಪ್ಪ ಸಭಾಂಗಣದಲ್ಲಿ ನಿಕಟಪೂರ್ವ ಅಧ್ಯಕ್ಷ ನೆಲ್ಸನ್ ಡಿಸೋಜ ಅವರ ಅಧ್ಯಕ್ಷತೆಯಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ವಲಯಾಧ್ಯಕ್ಷರಾದ ಯಶಸ್ವಿನಿ ಅವರು ರುಬೀನಾ ಎಂ.ಎ. ಅವರಿಗೆ ಪ್ರಮಾಣ ವಚನ ಬೋಧಿಸುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ಅಧಿಕಾರ ಸ್ವೀಕರಿಸಿ ಮಾತನಾಡಿದ ರುಬೀನಾ, ಎಲ್ಲರ ಸಹಕಾರದಿಂದ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಜೇಸಿಐನ ಧ್ಯೇಯೋದ್ದೇಶವಾದ ಯುವಜನತೆ ಯಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವಂತಹ ಮತ್ತು ಸಾಹಿತ್ಯ ಹಾಗೂ ಸಾಂಸ್ಕೃತಿಕ ಕ್ಷೇತ್ರದಲ್ಲಿ ಅವಕಾಶವನ್ನು ಕಲ್ಪಿಸುವಂತಹ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಎಂದರು. ರೀಜನ್ 'ಡಿ' ಯ ವಲಯ ಉಪಾಧ್ಯಕ್ಷರ ಹೆಚ್.ಎ. ಪ್ರಶಾಂತ, ಜೇಸಿಐಗೆ ಸೇರ್ಪಡೆಗೊಂಡ ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು.

ವೇದಿಕೆಯಲ್ಲಿ ಸೀನಿಯರ್ ಅಸೋಸಿಯೇಶನ್ ಅಧ್ಯಕ್ಷ ಶಶಿಕಾಂತ್, ಕಾರ್ಯದರ್ಶಿ ಜಗದಾಂಭ ಗುರುಪ್ರಸಾದ್, ಮಹಿಳಾ ಘಟಕದ ಅಧ್ಯಕ್ಷೆ ಪವಿತ್ರ ಲಕ್ಷಿö್ಮÃಕುಮಾರ್ ಮತ್ತು ಜೆಜೇಸಿ ಅಧ್ಯಕ್ಷೆ ಎಸ್.ಎ. ರಿಶಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ವಲಯದಿಂದ ರುಬೀನಾ ಅವರಿಗೆ ‘ಸೂಪರ್ ಸ್ಟಾರ್ ಪ್ರೆಸಿಡೆಂಟ್’ ಪ್ರಶಸ್ತಿ ನೀಡಿ ಗೌರವಿಸಲಾಯಿತು.