ಮಡಿಕೇರಿ, ಡಿ. ೧೬: ಮನರೇಗಾ ಯೋಜನೆಯನ್ನು ಗ್ರಾಮೀಣ ಸ್ವ-ಸಹಾಯ ಸಂಘದ ಮಹಿಳೆಯರು ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾ ಪಂಚಾಯಿತಿಯ ಉಪಕಾರ್ಯದರ್ಶಿ ಜಿ.ಧನರಾಜು ಕರೆ ನೀಡಿದರು.
ನಗರದ ಜಿ.ಪಂ. ಕಚೇರಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ಜಿಲ್ಲೆಯ ಎಲ್.ಸಿ.ಆರ್.ಪಿ ಮತ್ತು ಎಂ.ಬಿ.ಕೆ ಗಳಿಗೆ ನಡೆದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ದೀಪಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಮನರೇಗಾ ಯೋಜನೆ ಪ್ರಮುಖವಾದುದು. ಗ್ರಾಮೀಣ ಭಾಗದಲ್ಲಿ ವಲಸೆಯನ್ನು ತಪ್ಪಿಸಿ, ತಮ್ಮೂರಿನಲ್ಲಿಯೇ ೧೦೦ ದಿನಗಳ ಉದ್ಯೋಗವನ್ನು ಕುಟುಂಬಕ್ಕೆ ನೀಡಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿಯೂ ಮನರೇಗಾ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಿಸಲಾಗುತ್ತಿದೆ. ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳ ಮೂಲಕ ಗ್ರಾಮದ ಅಭಿವೃದ್ಧಿಯ ಜೊತೆಗೆ ದುರ್ಬಲ ವರ್ಗಗಳ ಸಬಲೀಕರಣವೂ ನಡೆಯುತ್ತಿದೆ ಎಂದರು.
ಜಿ.ಪಂ.ಯೋಜನಾ ನಿರ್ದೇಶಕ ಜಗದೀಶ್ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಸಂಜೀವಿನಿ ಒಕ್ಕೂಟಗಳ ಮೂಲಕ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ಮೂಲಕ ಎನ್.ಆರ್.ಎಲ್.ಎಂ. ಹಾಗೂ ಉದ್ಯೋಗ ಖಾತ್ರಿ ಯೋಜನೆಯ ಸಂಯೋಜನೆಯೊAದಿಗೆ ಅಣಬೆ ಶೆಡ್, ಸಂಜೀವಿನ್ ಶೆಡ್ಗಳನ್ನು ನಿರ್ಮಿಸಿಕೊಳ್ಳಬಹುದು ಎಂದರು.
ಅಧಿಕಾರಿಗಳಿAದಲೇ ಮಾಹಿತಿ: ಜಿಲ್ಲಾ ಪಂಚಾಯಿತಿ ವತಿಯಿಂದ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಅನುಷ್ಟಾನ ಇಲಾಖೆಯ ಅಧಿಕಾರಿಗಳೇ ಖುದ್ದು ಯೋಜನೆಯ ಮಾಹಿತಿ ನೀಡಿದರು.
ತೋಟಗಾರಿಕಾ ಇಲಾಖೆ ಮತ್ತು ಮನರೇಗಾ ಸಹಯೋಗದೊಂದಿಗೆ ಕೈಗೊಳ್ಳಬಹುದಾದ ಕಾಮಗಾರಿಗಳ ಬಗ್ಗೆ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಪ್ರಮೋದ್, ಅಣಬೆ ಬೇಸಾಯದ ಕುರಿತು ಎ.ಎಚ್.ಒ ಕಾವ್ಯ, ಸಾಮಾಜಿಕ ಅರಣ್ಯ ವಿಭಾಗದಲ್ಲಿ ಮನರೇಗಾದ ಸಹಯೋಗದೊಂದಿಗೆ ಕೈಗೊಳ್ಳಬಹುದಾದ ಕಾಮಗಾರಿಗಳ ಕುರಿತು ಉಪ ಅರಣ್ಯ ಸಂರಕ್ಷಣಾಧಿಕಾರಿ ಪೂರ್ಣಿಮ, ಕೃಷಿ ಇಲಾಖೆಗೆ ಸಂಬAಧಿಸಿದAತೆ ಸಹಾಯಕ ನಿರ್ದೇಶಕರಾದ ನಾರಾಯಣ ರೆಡ್ಡಿ, ರೇಷ್ಮೆ ಇಲಾಖೆಯ ಯೋಜನೆಗಳ ಕುರಿತು ಇಲಾಖಾಧಿಕಾರಿ ಮಹೇಶ್ ಮಾಹಿತಿ ನೀಡಿದರು.
ಇದರೊಂದಿಗೆ ಇಂಡಿಯಾ ಪೋಸ್ಟಲ್ ಪೇಮೆಂಟ್ ಸಂಬAಧಿಸಿದAತೆ ನಾಗರಾಜ್, ಇ-ಶ್ರಮ್ ಯೋಜನೆ ಕುರಿತಂತೆ ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಂ.ಎA.ಯತ್ನಟ್ಟಿ ಅವರು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಯೋಜನಾಧಿಕಾರಿ ರಾಜ್ ಗೋಪಾಲ್, ಮುಖ್ಯ ಲೆಕ್ಕಾಧಿಕಾರಿ ಝೀವಲ್ ಖಾನ್, ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕರಾದ ರವೀಶ್ ಇತರರು ಇದ್ದರು.