ಮಡಿಕೇರಿ, ಡಿ. ೧೭: ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಬೆಟ್ಟಗೇರಿಯ ಉದಯ ಆಂಗ್ಲ ಮಾಧ್ಯಮ ಶಾಲೆ(ಸಂತ ಅಲೋಸಿಸ್)ಯ ವಿದ್ಯಾರ್ಥಿಗಳಾದ ಟಿ.ಎಸ್. ವಿಶಾಲ್ ಚಿನ್ನದ ಪದಕ, ಪಿ.ಎನ್. ಜೀವ ಹಾಗೂ ಧನಂಜಯ್ ಬೆಳ್ಳಿ ಪದಕ ಪಡೆದಿದ್ದಾರೆ.
ಇವರು ಕೊಡಗು ಕಿಕ್ ಬಾಕ್ಸಿಂಗ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಎನ್.ಸಿ.ಸುದರ್ಶನ್ ಹಾಗೂ ತರಬೇತುದಾರ ಬಿ.ಎ.ಆನಂದ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.