ಮಡಿಕೇರಿ, ಡಿ. ೧೬: ಮಡಿಕೇರಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಘಟಕಗಳ (ಎನ್.ಎಸ್.ಎಸ್.) ವಾರ್ಷಿಕ ವಿಶೇಷ ಶಿಬಿರ ೨೦೨೨-೨೩ ತಾ. ೨೦ ರಿಂದ ತಾ. ೨೬ ರವರೆಗೆ ಬಲ್ಲಮಾವಟಿಯ ನೇತಾಜಿ ಪ್ರೌಢಶಾಲೆಯಲ್ಲಿ ಜರುಗಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ತಾ. ೨೦ರಂದು ಬೆಳಿಗ್ಗೆ ೧೦.೩೦ಕ್ಕೆ ನೇತಾಜಿ ಕೇಂದ್ರ ವಿದ್ಯಾಸಂಸ್ಥೆ ಅಧ್ಯಕ್ಷ ಎ.ಕೆ. ಮನುಮುತ್ತಪ್ಪ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಫೀ.ಮಾ. ಕೆ.ಎಂ. ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಡಾ. ಸಿ. ಜಗತ್ ತಿಮ್ಮಯ್ಯ ವಹಿಸಲಿದ್ದಾರೆ. ತಾ. ೨೬ ರಂದು ಸಮಾರೋಪ ಸಮಾರಂಭ ಮಧ್ಯಾಹ್ನ ೨.೩೦ ಗಂಟೆಗೆ ನಡೆಯಲಿದ್ದು, ಶಿಬಿರದಲ್ಲಿ ಎನ್.ಎಸ್.ಎಸ್.ನ ೧೦೦ ಸ್ವಯಂ ಸೇವಕರು ಪಾಲ್ಗೊಳ್ಳಲಿದ್ದಾರೆ.