ಮಡಿಕೇರಿ, ಡಿ. ೧೭: ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ತಾ. ೧೯ ಬೆಳಿಗ್ಗೆ ೧೧ ರಿಂದ ಮಧ್ಯಾಹ್ನ ೧ ಗಂಟೆಯವರೆಗೆ ಸೋಮವಾರಪೇಟೆಯ ಲೋಕೋಪಯೋಗಿ ಪ್ರವಾಸಿ ಮಂದಿರ ಮತ್ತು ತಾ. ೨೩ ರಂದು ಬೆಳಿಗ್ಗೆ ೧೧ ರಿಂದ ೧ ಗಂಟೆಯವರೆಗೆ ಮಡಿಕೇರಿಯ ಸುದರ್ಶನ ಅತಿಥಿ ಗೃಹದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ.
ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ಮಾಹಿತಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ ಮಡಿಕೇರಿ ದೂ.ಸಂ. ೦೮೨೭೨-೨೯೫೨೯೭ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಕರ್ನಾಟಕ ಲೋಕಾಯುಕ್ತದ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.