ವೀರಾಜಪೇಟೆ, ಡಿ. ೧೬: ವೀರಾಜಪೇಟೆಯ ತಾಲೂಕು ಕಚೇರಿ ಆವರಣದಲ್ಲಿ, ೨೦೨೧-೨೨ನೇ ಸಾಲಿನ ಅಮೃತ ನಿರ್ಮಲ ನಗರ ಅನುದಾನದಡಿಯಲ್ಲಿ ರೂ.೧೦.೯೫ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸಾರ್ವಜನಿಕ ಶೌಚಾಲಯವನ್ನು ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಶಾಸಕರು ಪಟ್ಟಣ ವ್ಯಾಪ್ತಿಯಲ್ಲಿ ಶುಚಿತ್ವ ಕಾಪಾಡುವ ದೃಷ್ಟಿಯಲ್ಲಿ ಮತ್ತು ತಾಲೂಕು ಕಚೇರಿಗಳಿಗೆ ಬರುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ೧೦.೯೫ ಲಕ್ಷ ವೆಚ್ಚದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಲಾಗಿದೆ. ಸಾರ್ವಜನಿಕರು ಅಶುಚಿತ್ವಗೊಳಿಸದೇ, ಶುಚಿತ್ವ ಕಾಪಾಡಿಕೊಂಡು ಸಹಕರಿಸಬೇಕು ಎಂದು ಹೇಳಿದರು.
ಜಿಲ್ಲಾಧಿಕಾರಿ ಬಿ.ಸಿ ಸತೀಶ, ತಾಲೂಕು ತಹಶೀಲ್ದಾರ್ ಅರ್ಚನಾ ಭಟ್, ಪುರಸಭೆ ಮುಖ್ಯಾಧಿಕಾರಿ ಎ. ಚಂದ್ರಕುಮಾರ್, ಅಭಿಯಂತರ ಹೇಮ್ ಕುಮಾರ್, ಪುರಸಭೆ ಅಧ್ಯಕ್ಷೆ ಟಿ.ಆರ್. ಸುಶ್ಮಿತಾ, ಪುರಸಭೆ ಚುನಾಯಿತ ಪ್ರತಿನಿಧಿಗಳು, ತಾಲೂಕು ಕಚೇರಿ ಸಿಬ್ಬಂದಿಗಳು, ಪುರಸಭೆ ಸಿಬ್ಬಂದಿಗಳು, ಕಂದಾಯ ಇಲಾಖೆ ಅಧಿಕಾರಿಗಳು, ಗುತ್ತಿಗೆದಾರರು ಹಾಜರಿದ್ದರು.