ಕುಶಾಲನಗರ, ಡಿ. ೧೮: ಆಮ್‌ಆದ್ಮಿ ಪಕ್ಷ ಕೊಡಗು ಜಿಲ್ಲೆಯಲ್ಲಿ ಗ್ರಾಮ ಸಂಪರ್ಕ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್‌ಜೈನ್ ತಿಳಿಸಿದ್ದಾರೆ.
ಕುಶಾಲನಗರದಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ೨೫ ಮಂದಿ ಕಾರ್ಯಕರ್ತರನ್ನು ಗುರುತಿಸಿ ಮನೆ - ಮನೆಗೆ ತೆರಳಿ ಪಕ್ಷದ ಯೋಜನೆಗಳ ಬಗ್ಗೆ ಮನಸ್ಸಿಗೆ ಮುಟ್ಟುವಂತೆ ತಿಳಿಸಲಾಗುತ್ತದೆ ಎಂದರು.
ಮುAಬರುವ ವಿಧಾನಸಭಾ ಚುನಾವಣೆಯಲ್ಲಿ ಆಮ್‌ಆದ್ಮಿ ಪಕ್ಷ, ರಾಜ್ಯದ ೨೨೪ ಕ್ಷೇತ್ರಗಳಲ್ಲೂ ಪಕ್ಷ ತಮ್ಮ ಅಭ್ಯರ್ಥಿಗಳನ್ನು ಹಾಕುವುದಾಗಿ ತಿಳಿಸಿದರು. ಬಿಜೆಪಿ, ಕಾಂಗ್ರೆಸ್ ಹೊರತುಪಡಿಸಿದರೆ ಎಎಪಿ ಕೂಡ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದುಕೊಂಡಿದೆ. ದೆಹಲಿ ಮಾದರಿಯಲ್ಲಿ ಜನಪರ ಆಡಳಿತ ರಾಜ್ಯದಲ್ಲೂ ಅಗತ್ಯವಿದೆ ಎಂದರು.
ಗ್ರಾಮ ಪಂಚಾಯಿತಿಯಿAದ ಹಿಡಿದು ಶಾಸಕರು, ಸಂಸದರು, ಒಂದೇ ಪಕ್ಷದವರು ಇದ್ದು, ಕೊಡಗಿನಲ್ಲಿ ಸುಮಾರು ೨೦ ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ ಎಂದು ಹೇಳಿದ ದರ್ಶನ್‌ಜೈನ್, ಉನ್ನತ ಶಿಕ್ಷಣಕ್ಕಾಗಿ, ವೈದ್ಯಕೀಯ ಚಿಕಿತ್ಸೆಗಾಗಿ ಜನರು ಅಕ್ಕ ಪಕ್ಕದ ಜಿಲ್ಲೆಗಳನ್ನು ಅವಲಂಬಿಸಬೇಕಾಗಿದೆ. ಯುವಕ ಯುವತಿಯರಿಗೆ ಉದ್ಯೋಗಾವಕಾಶ ಜಿಲ್ಲೆಯಲ್ಲಿ ಬಹಳ ಕಡಿಮೆ ಇದೆ. ರಾಜ್ಯದಲ್ಲಿ ಮೂರು ಪಕ್ಷಗಳು ಅಧಿಕಾರ ಮಾಡಿದರೂ ಇದುವರೆಗೆ ಕೊಡಗು ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಪಕ್ಷದ ಮೈಸೂರು-ಕೊಡಗು ವಲಯ ಉಸ್ತುವಾರಿ ಅಬ್ದುಲ್ ರಜಾಕ್ ಮಾತನಾಡಿ, ದೇಶದಲ್ಲಿ ಸಮಸ್ಯೆಗಳ ಬಗ್ಗೆ ಜನತೆದನಿ ಎತ್ತಿದ ಪ್ರತಿ ಸಂದರ್ಭದಲ್ಲಿ ಬೇರೆ ವಿಚಾರಗಳನ್ನು ವೈಭವೀಕರಿಸಿ ಜನರ ಹಾದಿ ತಪ್ಪಿಸಲಾಗುತ್ತಿದೆ ಎಂದು ಆರೋಪಿಸಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರ ಆಕಾಂಕ್ಷಿ ಕಿಶನ್ ಮಾತನಾಡಿದರು. ಗೋಷ್ಠಿಯಲ್ಲಿ ಜಿಲ್ಲಾ ಮಾಧ್ಯಮ ವಕ್ತಾರ ಭೋಜಣ್ಣ ಸೋಮಯ್ಯ, ಕಾರ್ಯದರ್ಶಿ ಪೃಥ್ವಿ, ಕೊಡಗು ಮತ್ತು ಮೈಸೂರಿನ ಮುಖಂಡರಾದ ಎಂ.ಕೆ. ಅಪ್ಪಯ್ಯ, ರಂಗಯ್ಯ ಇದ್ದರು.