ಮಡಿಕೇರಿ, ಡಿ. ೧೭: ಕೊಡಗು ಮೂಲನಿವಾಸಿ ಅರಮನೆಪಾಲೆ ಸಮಾಜದ ವಾರ್ಷಿಕ ಕ್ರೀಡೋತ್ಸವ ತಾ. ೧೮ ರಂದು (ಇಂದು) ಬೆಳಿಗ್ಗೆ ೯ ಗಂಟೆಗೆ ಮೂರ್ನಾಡು ವಿದ್ಯಾಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯಲಿದೆ.

ಶಾಸಕ ಕೆ.ಜಿ. ಬೋಪಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಂಘದ ಅಧ್ಯಕ್ಷ ಪಿ.ಜಿ. ಚೆನಿಯಾ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಹಿರಿಯ ವಕೀಲ ಅಜ್ಜಿಕುಟ್ಟೀರ ಎ.ಎಸ್. ಪೊನ್ನಣ್ಣ, ಸಮಾಜ ಸೇವಕ ಡಾ. ಮಂಥರ್‌ಗೌಡ, ಶಕ್ತಿ ದಿನಪತ್ರಿಕೆ ಸಲಹಾ ಸಂಪಾದಕ ಬಿ.ಜಿ. ಅನಂತಶಯನ, ಮಡಿಕೇರಿ ರಾಜೇಶ್ವರಿ ವಿದ್ಯಾಸಂಸ್ಥೆಯ ಟ್ರಸ್ಟಿ ಸಚಿನ್ ವಾಸುದೇವು, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಮಂಞÂÃರ ಸಾಬು ತಿಮ್ಮಯ್ಯ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.