ಕುಶಾಲನಗರ, ಡಿ. ೧೮: ಕುಶಾಲನಗರ ಗೌಡ ಸಮಾಜ ಮತ್ತು ಸಮಾಜದ ಸಹ ಸಂಘಟನೆಗಳ ಆಶ್ರಯದಲ್ಲಿ ಇಲ್ಲಿನ ಗೌಡ ಸಮಾಜದಲ್ಲಿ ಅರೆಭಾಷೆ ದಿನ ಆಚರಿಸಲಾಯಿತು.

ಕುಶಾಲನಗರ ಗೌಡ ಸಮಾಜದ ಅಧ್ಯಕ್ಷ ಚಿಲ್ಲನ ಗಣಿಪ್ರಸಾದ್ ಅಧ್ಯಕ್ಷತೆ ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಎಸ್‌ಎನ್‌ಎಲ್ ಇಂಜಿನಿಯರ್ ಕೊಟ್ಟಕೇರಿಯನ ಲೀಲಾ ದಯಾನಂದ ಪ್ರಧಾನ ಭಾಷಣಕಾರರಾಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಅರೆಭಾಷೆ ದಿನದ ಆಚರಣೆ ಮಹತ್ವ ಮತ್ತು ಮಾತೃಭಾಷೆ ಅಗತ್ಯತೆಯ ಬಗ್ಗೆ ವಿವರಣೆ ನೀಡಿದರು. ಕುಶಾಲನಗರ ಕೊಡವ ಸಮಾಜದ ಅಧ್ಯಕ್ಷ ಮಂಡೇಪAಡ ಮೊಣ್ಣಪ್ಪ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಗೌಡ ಯುವಕ ಸಂಘ, ಗೌಡ ಸಾಂಸ್ಕೃತಿಕ ವೇದಿಕೆ, ಪದ್ಮಾವತಿ ಮಹಿಳಾ ಒಕ್ಕೂಟ, ನಿವೃತ್ತ ಗೌಡ ಸೈನಿಕರ ಕೂಟ, ಮಹಿಳಾ ಸ್ವಸಹಾಯ ಸಂಘ, ಅರೆಭಾಷೆ ಯೂತ್ ವಿಂಗ್‌ನ ಪದಾಧಿಕಾರಿಗಳು ಮತ್ತು ಕುಶಾಲನಗರ ವ್ಯಾಪ್ತಿಯಲ್ಲಿ ನೆಲೆಸಿರುವ ಅರೆಭಾಷಿಕ ಗೌಡ ಸಮುದಾಯದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಗೌಡ ಸಮಾಜಗಳ ಒಕ್ಕೂಟದ ಖಜಾಂಚಿ ಕರಂದ್ಲಾಜೆ ಆನಂದ ಕಾರ್ಯಕ್ರಮ ನಿರ್ವಹಿಸಿದರು.