ಮಡಿಕೇರಿ, ಡಿ. ೧೮: ಮಕ್ಕಳ ಜೀವ ಮತ್ತು ಜೀವನ ಅತೀ ಮುಖ್ಯ ವಾಗಿದ್ದು, ಆ ನಿಟ್ಟಿನಲ್ಲಿ ಮಕ್ಕಳ ಸಂರಕ್ಷಣೆ ಮಾಡುವತ್ತ ಪ್ರತಿ ಯೊಬ್ಬರೂ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಬದುಕನ್ನು ತಿದ್ದಿ ತೀಡಿ ಸಮಾಜದಲ್ಲಿ ಉತ್ತಮ ನಾಗರಿಕರನ್ನಾಗಿ ರೂಪಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷÀ ಕೆ. ನಾಗಣ್ಣ ಗೌಡ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ‘ಮಕ್ಕಳ ಪೋಷಣೆ ಮತ್ತು ರಕ್ಷಣೆ, ಪೋಕ್ಸೋ ಕಾಯ್ದೆ ಅನುಷ್ಠಾನ ಮತ್ತಿತರ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲೆ ಒಂದಲ್ಲ ಒಂದು ರೀತಿಯಲ್ಲಿ ದೌರ್ಜನ್ಯಗಳು ನಡೆಯುತ್ತಿದ್ದು, ಇದನ್ನು ಪ್ರತಿಯೊಬ್ಬರೂ ಗಂಭೀರವಾಗಿ ಪರಿಗಣಿಸಬೇಕು.

ಮಕ್ಕಳ ಮೇಲೆ ದೌರ್ಜನ್ಯ ನಡೆಯದಂತೆ ಎಚ್ಚರ ವಹಿಸಬೇಕು. ಮಕ್ಕಳನ್ನು ಯಾವುದೇ ಕೆಲಸ ಕಾರ್ಯಗಳಿಗೆ ಬಿಡದೆ ಆಟ, ಪಾಠ, ಸಂಗೀತ, ಸಾಹಿತ್ಯ ಹೀಗೆ ವಿವಿಧ ಸಮಾಜಮುಖಿ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವಂತಾಗಲು ಪ್ರೇರೇಪಿಸಬೇಕು. ಅದನ್ನು ಬಿಟ್ಟು ನಿರ್ಬಂಧಗಳನ್ನು ಹೇರಬಾರದು ಎಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು ಸಲಹೆ ನೀಡಿದರು.

ನೆಮ್ಮದಿಯ ಸಮಾಜ ನಿರ್ಮಾಣಕ್ಕೆ ಸಂಸ್ಕಾರಯುತ ಬದುಕು ಅಗತ್ಯ. ಮಕ್ಕಳಿಗೆ ಅರಿವು, ಜ್ಞಾನ ನೀಡುವುದರ ಜೊತೆಗೆ ಕ್ರಿಯಾಶೀಲ ಪ್ರಜ್ಞೆ ಬರುವಂತೆ ನಡೆದುಕೊಳ್ಳಬೇಕು. ಬಾಲ್ಯ ವಿವಾಹ ನಡೆಯದಂತೆ ನೋಡಿಕೊಳ್ಳಬೇಕು. ಹಾಡಿಗಳಲ್ಲಿ ಮಕ್ಕಳ ಸಂರಕ್ಷಣೆ ಸಂಬAಧಿಸಿದAತೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಕೌನ್ಸಿಲಿಂಗ್ ಮೂಲಕ ಮಕ್ಕಳ ಕ್ರೀಯಾಶೀಲ ಚಟುವಟಿಕೆಗೆ ಒತ್ತು ನೀಡಬೇಕು ಎಂದು ನಾಗಣ್ಣ ಗೌಡ ಅವರು ವಿವರಿಸಿದರು.’

ಮಕ್ಕಳ ಸ್ನೇಹಿ ಪೊಲೀಸ್ ಠಾಣೆಗಳನ್ನಾಗಿ ಪರಿವರ್ತಿಸಬೇಕು. ಮಕ್ಕಳ ಹಕ್ಕು ಸಂರಕ್ಷಣೆ ಜೊತೆಗೆ ಕರ್ತವ್ಯದ ಬಗ್ಗೆಯೂ ಮಾಹಿತಿ ನೀಡಬೇಕು. ಮಕ್ಕಳ ಪರವಾಗಿ ಕೆಲಸ ಮಾಡಬೇಕು ಎಂದರು.

ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಮಾತನಾಡಿ, ಶಾಲಾ ಶಿಕ್ಷಣ ಮತ್ತು ಶಾಲಾ ಕಾಲೇಜು ಆವರಣದಲ್ಲಿ ಕೋಟ್ಪಾ ನಿಯಮಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿವೆ ಎಂದು ತಿಳಿಸಿದರು. ಮಕ್ಕಳ ಬೆಳವಣಿಗೆಗೆ ಕುಟುಂಬದಲ್ಲಿ ಉತ್ತಮ ವಾತಾವರಣ ಇರಬೇಕು.

ಪೋಷಕರು ಮೊಬೈಲ್ ನೋಡಿದರೆ ಮಕ್ಕಳು ಅದನ್ನು ಅನುಸರಿಸುತ್ತಾರೆ. ಆದ್ದರಿಂದ ಈ ಬಗ್ಗೆ ಎಚ್ಚರ ವಹಿಸಬೇಕು ಎಂದರು. ಕೊಡಗು ಜಿಲ್ಲೆಯಲ್ಲಿ ಸಾಕ್ಷರತಾ ಪ್ರಮಾಣ ಉತ್ತಮವಾಗಿದ್ದರೂ ಸಹ ಹಾಡಿಗಳಲ್ಲಿ ಇನ್ನೂ ಸಹ ಸಣ್ಣ ಪುಟ್ಟ ಬದಲಾವಣೆ ಆಗಬೇಕಿದೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ. ಅಯ್ಯಪ್ಪ ಮಾತನಾಡಿ ಬಾಲ್ಯ ವಿವಾಹ ತಡೆಯಬೇಕಿದೆ. ಪೋಕ್ಸೋ ಕಾನೂನಿನ ಬಗ್ಗೆ ಅರಿವು ಮೂಡಿಸಬೇಕು. ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ಸಂಬAಧಿಸಿದAತೆ ಕಾನೂನಿನ ಬಗ್ಗೆ ಅರಿವಿರಬೇಕು. ಭಯ ಇದ್ದಲ್ಲಿ ದೌರ್ಜನ್ಯ ಕಂಡು ಬರುವುದಿಲ್ಲ. ಆ ನಿಟ್ಟಿನಲ್ಲಿ ಹೆಚ್ಚಿನ ಜಾಗೃತಿ ಅಗತ್ಯ ಎಂದರು.

ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಸೂರಜ್ ಕಾಲ ಕಾಲಕ್ಕೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸಭೆ ನಡೆಸಲಾಗುತ್ತಿದೆ ಎಂದರು. ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಅಬ್ದುಲ್ ಲತೀಫ್ ಮಕ್ಕಳ ಹಕ್ಕುಗಳ ರಕ್ಷಣೆ ಸಂಬAಧಿಸಿದAತೆ ಕೌನ್ಸಿಲಿಂಗ್ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪ ನಿರ್ದೇಶಕ ರಂಗ ಧಾಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ವಿ. ಸುರೇಶ್, ಶ್ರೀಶೈಲ ಬಿಳಗಿ ಅವರು ಶಾಲಾ ಹಂತದಲ್ಲಿ ಮಕ್ಕಳಿಗೆ ಕಲಿಕಾ ವಾತಾವರಣ ನಿರ್ಮಾಣ, ಶಾಲೆಗೊಂದು ವನ, ಕಲಿಕಾ ಹಬ್ಬ, ಊರು ಸುತ್ತೋಣ ಹೀಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿ ಕೊಳ್ಳಲಾಗಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ವೆಂಕಟೇಶ್ ಅವರು ಶಾಲೆ ಹಾಗೂ ಅಂಗನ ವಾಡಿಗಳಿಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಜೊತೆಗೆ ಆರೋಗ್ಯ ಸೌಲಭ್ಯ ಕಲ್ಪಿಸಲು ಶ್ರಮಿಸಲಾಗುತ್ತಿದೆ ಎಂದರು. ಕಾರ್ಮಿಕ ಇಲಾಖಾ ಅಧಿಕಾರಿ ಅನಿಲ್ ಬಗಟಿ ಅವರು ಜಿಲ್ಲೆಯಲ್ಲಿ ೫ ಮಂದಿ ಬಾಲ ಕಾರ್ಮಿಕ ಮತ್ತು ಮೂವರು ಕಿಶೋರ ಕಾರ್ಮಿಕರನ್ನು ಪತ್ತೆಹಚ್ಚಲಾಗಿದ್ದು, ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿ, ಬಳಿಕ ಸರ್ಕಾರಿ ಬಾಲ ಮಂದಿರಕ್ಕೆ ಸೇರ್ಪಡೆ ಮಾಡಲಾಗಿದೆ ಎಂದರು. ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್ ಮತ್ತು ಬಿಸಿಎಂ ಇಲಾಖೆ ಅಧಿಕಾರಿ ಎನ್. ಮಂಜುನಾಥ್, ಅವರು ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳ ಸ್ನೇಹಿ ವಾತಾವರಣ ನಿರ್ಮಾಣ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ.ನಾಗಣ್ಣ ಗೌಡ ಅವರು ಮಕ್ಕಳ ಜೊತೆ ಸಂವಾದ ಮಾಡಬೇಕು ಎಂದರು.

ಮಕ್ಕಳ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಶೈಕ್ಷಣಿಕ ಚಟುವಟಿಕೆ ಜೊತೆಗೆ ಕ್ರೀಡೆಯೂ ಅಗತ್ಯ. ಆ ನಿಟ್ಟಿನಲ್ಲಿ ಮಕ್ಕಳ ಬೆಳವಣಿಗೆಯತ್ತ ಗಮನಹರಿಸಬೇಕು ಎಂದು ಸಲಹೆ ನೀಡಿದರು.

ಡಿವೈಎಸ್‌ಪಿ ಗಜೇಂದ್ರ ಪ್ರಸಾದ್, ತಾ.ಪಂ. ಇಒ ಜಯಣ್ಣ, ಜಿ.ಪಂ. ಯೋಜನಾ ನಿರ್ದೇಶಕ ಜಗದೀಶ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಉಷಾ ಅಯ್ಯಣ್ಣ, ಕುಮಾರಿ ಅವರು ಮಕ್ಕಳ ಹಕ್ಕುಗಳ ಸಂರಕ್ಷಣೆ ಸಂಬAಧಿಸಿದAತೆ ಹಲವು ಮಾಹಿತಿ ನೀಡಿದರು.

೧೮ ವರ್ಷ ಮೇಲ್ಪಟ್ಟ ನಿರ್ಗತಿಕ ಮಕ್ಕಳಿಗೆ ತಾತ್ಕಾಲಿಕವಾಗಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಬೇಕು. ಜೊತೆಗೆ ಉದ್ಯೋಗ ಕಲ್ಪಿಸಲು ಮುಂದಾಗಬೇಕು. ಈ ಸಂಬAಧ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ನಾಗಣ್ಣ ಗೌಡ ಅವರು ಸಲಹೆ ನೀಡಿದರು. ಐಟಿಡಿಪಿ ಇಲಾಖಾ ಅಧಿಕಾರಿ ಎಸ್. ಹೊನ್ನೆಗೌಡ, ಮಕ್ಕಳ ಸಹಾಯ ವಾಣಿಯ ಸಮಾಲೋಚಕ ನವೀನ್ ಕುಮಾರ್, ಕಾರ್ಯಕ್ರಮ ಅನುಷ್ಠಾನ ಅಧಿಕಾರಿ ಪೂಣಚ್ಚ, ತಹಶೀಲ್ದಾರ್ ಪಿ.ಎಸ್. ಮಹೇಶ್ ಇತರರು ಹಲವು ಮಾಹಿತಿ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎನ್. ಮಂಜುನಾಥ್, ಸೋಮವಾರ ಪೇಟೆಯ ಸಿಡಿಪಿಒ ಅಣ್ಣಯ್ಯ, ಇತರರು ಹಲವು ಮಾಹಿತಿ ನೀಡಿದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ನಾಗಣ್ಣ ಗೌಡ ಅವರು ಮಕ್ಕಳ ಹಕ್ಕುಗಳ ರಕ್ಷಣೆ ಸಂಬAಧಿಸಿದAತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ರಾಜ್ಯದಲ್ಲಿ ಸುಮಾರು ೧೧೦ ‘ಸುವೋ ಮೋಟೋ’ ಪ್ರಕರಣಗಳನ್ನು ದಾಖಲಿಸಲಾಗಿದೆ. ಮಕ್ಕಳಿಗೆ ಅನ್ಯಾಯವಾಗುವುದನ್ನು ತಡೆಯಲು ಹಲವು ಕ್ರಮ ಕೈಗೊಳ್ಳಲಾಗಿದೆ ಎಂದರು.