ಮಡಿಕೇರಿ, ಡಿ. ೧೮: ದೇವಣಗೇರಿಯ ಬಿ.ಸಿ. ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ರೋಟರಿ ಸಂಸ್ಥೆ ವತಿಯಿಂದ ಗುರುತಿನ ಚೀಟಿ ವಿತರಿಸಲಾಯಿತು. ರೋಟರಿ ಸಂಸ್ಥೆಯ ಅಧ್ಯಕ್ಷ ಹರಿಪ್ರಸಾದ್ ಗುರುತಿನ ಚೀಟಿ ವಿತರಿಸಿದರು.

ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಮುಕ್ಕಾಟಿರ ಐ. ನಾಣಯ್ಯ, ರೋಟರಿ ಕಾರ್ಯದರ್ಶಿ ಡಾ. ನರಸಿಂಹನ್, ಸದಸ್ಯ ಮಾಚಯ್ಯ, ಶಾಲಾ ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಾಲಾ ಮುಖ್ಯ ಶಿಕ್ಷಕ ಲೋಕೇಶ್ ಸ್ವಾಗತಿಸಿ, ಶಿಕ್ಷಕಿ ಪ್ರಮೀಳಾ ನಿರೂಪಿಸಿ, ಸುನಿತಾ ವಂದಿಸಿದರು.