ಡಿ.ಕೆ.ಶಿ. ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ

ಬೆಂಗಳೂರು, ಡಿ. ೧೯: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆಸಿದ್ದು, ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ನ್ಯಾಶನಲ್ ಎಜುಕೇಶನ್ ಫೌಂಡೇಶನ್ ಮೇಲೆ ದಾಳಿ ನಡೆದಿದೆ. ಸದ್ಯ ಡಿ.ಕೆ. ಶಿವಕುಮಾರ್ ಅವರು ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಭಾಗಹಿಸಿದ್ದು, ಇದೇ ಸಂದರ್ಭದಲ್ಲಿ ಇತ್ತ ಬೆಂಗಳೂರಿನಲ್ಲಿ ಸಿಬಿಐ ದಾಳಿ ನಡೆಸಿದೆ. ಅಧಿಕಾರಿಗಳು ಪ್ರಮುಖ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎನ್ನುವುದು ತಿಳಿದು ಬಂದಿದೆ. ಈ ಹಿಂದೆ ಕೂಡ ಡಿ.ಕೆ. ಶಿವಕುಮಾರ್ ಅವರ ಮನೆ ಮೇಲೆ ಇಡಿ, ಆದಾಯ ತೆರಿಗೆ ಅಧಿಕಾರಿಗಳು, ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಅದಕ್ಕೆ ಸಂಬAಧಪಟ್ಟAತೆ ಅವರನ್ನು ಸದ್ಯ ವಿಚಾರಣೆ ನಡೆಸುತ್ತಿದೆ. ಡಿ.ಕೆ. ಶಿವಕುಮಾರ್ ಅವರು ನ್ಯಾಷನಲ್ ಎಜುಕೇಶನ್ ಫೌಂಡೇಶನ್ ಸಂಸ್ಥೆಯ ಚೇರ್ಮನ್ ಆಗಿದ್ದು, ಅವರ ಮಗಳಾದ ಐಶ್ವರ್ಯ ಅವರು ಕಾರ್ಯದರ್ಶಿಯಾಗಿದ್ದಾರೆ. ಇಂದು ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ದಾಳಿ ನಡೆದಿದೆ ಎನ್ನಲಾಗಿದೆ. ದಾಳಿ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿರುವ ಡಿ.ಕೆ. ಶಿವಕುಮಾರ್, ಇಂದು ದಾಳಿ ವೇಳೆಯಲ್ಲಿ ನಮ್ಮ ಟ್ರಸ್ಟಿಗಳನ್ನು ಭೇಟಿ ಮಾಡಿ, ಕೆಲವು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ನನ್ನ ವಕೀಲರಿಗೆ ಕೂಡ ನಾನು ನೀಡಿರುವ ಹಣಕ್ಕೆ ಸಂಬAಧಪಟ್ಟAತೆ ನೋಟೀಸ್ ನೀಡಿದ್ದಾರೆ. ಇದಲ್ಲದೇ ನಮ್ಮ ಊರಿಗೆ ತೆರಳಿ ಅಲ್ಲಿರುವ ಜಮೀನು ಹಾಗೂ ಮನೆಯನ್ನು ಸುತ್ತು ಹಾಕಿ ತಹಶೀಲ್ದಾರ್ ಅವರಿಂದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ನನ್ನ ವಿರುದ್ಧ ಕೇಸ್‌ಗಳು ನಡೆಯುತ್ತಿದ್ದು, ಎಲ್ಲಾ ಕಡೆಯಿಂದ ನನಗೆ ತೊಂದರೆ ನೀಡುತ್ತಿದ್ದಾರೆ ಎಂದು ಹೇಳಿದರು.

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಕ್ಷೀಣ

ನವದೆಹಲಿ, ಡಿ. ೧೯: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಶೇ. ೧೬೮ ರಷ್ಟು ಕಡಿಮೆಯಾಗಿದೆ. ಇನ್ನು ೨೦೧೫ ರಿಂದ ಎಡಪಂಥೀಯ ಉಗ್ರಗಾಮಿ ಚಟುವಟಿಕೆಗಳು ಶೇ. ೨೬೫ ರಷ್ಟು ಕಡಿಮೆಯಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು ಭಯೋತ್ಪಾದನೆಗೆ ಶೂನ್ಯ ಸಹಿಷ್ಣುತೆಯ ನೀತಿಯನ್ನು ಹೊಂದಿದೆ ಎಂದು ಠಾಕೂರ್ ಹೇಳಿದರು. ಸರ್ಕಾರವು ನಿರ್ಣಾಯಕ ಕ್ರಮವನ್ನು ತೆಗೆದುಕೊಂಡಿತು. ಇದು ಸ್ಪಷ್ಟ ಫಲಿತಾಂಶಗಳನ್ನು ನೀಡಿದೆ. ಉರಿ ದಾಳಿಗೆ ಪ್ರತಿಯಾಗಿ ೨೦೧೬ರಲ್ಲಿ ಸರ್ಜಿಕಲ್ ಸ್ಟೆçöÊಕ್ ನಡೆಸಲಾಗಿತ್ತು ಎಂದು ಠಾಕೂರ್ ತಿಳಿಸಿದರು. ೨೦೧೯ರಲ್ಲಿ ಬಾಲಾಕೋಟ್ ವೈಮಾನಿಕ ದಾಳಿಯನ್ನು ಪುಲ್ವಾಮಾ ಬಾಂಬ್ ದಾಳಿಗೆ ಪ್ರತಿಕ್ರಿಯೆಯಾಗಿ ನಡೆಸಲಾಯಿತು. ಆದ್ದರಿಂದ ಈ ಎಲ್ಲಾ ನಿರ್ಣಾಯಕ ಕ್ರಮಗಳು ಸ್ಪಷ್ಟ ಫಲಿತಾಂಶಗಳನ್ನು ನೀಡಿವೆ. ೨೦೧೪ರ ನಂತರ ಭಯೋತ್ಪಾದನೆಯಿಂದಾಗಿ ಶೇ. ೮೦ ರಷ್ಟು ಹಿಂಸಾಚಾರ ಕಡಿಮೆಯಾಗಿದೆ. ನಾಗರಿಕರ ಸಾವು ಶೇ. ೮೯ ರಷ್ಟು ಕಡಿಮೆಯಾಗಿದೆ ಮತ್ತು ೬,೦೦೦ ಭಯೋತ್ಪಾದಕರು ಶರಣಾಗಿದ್ದಾರೆ ಎಂದರು. ಭಯೋತ್ಪಾದನೆಗೆ ಹಣಕಾಸು ಒದಗಿಸಿದ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣವು ಶೇ. ೯೪ ಕ್ಕಿಂತ ಹೆಚ್ಚಿದೆ ಎಂದು ಕೇಂದ್ರ ಸಚಿವರು ಹೇಳಿದರು. ೨೦೧೫ರಿಂದ ಈ ವರ್ಷ ಜೂನ್ ೨೦೨೨ರವರೆಗೆ ಎಡಪಂಥೀಯ ಉಗ್ರವಾದದ ಘಟನೆಗಳಲ್ಲಿ ಶೇ. ೨೬೫ ಕ್ಕಿಂತ ಹೆಚ್ಚು ಕಡಿಮೆಯಾಗಿದೆ ಎಂದು ಅವರು ಹೇಳಿದರು. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಈಶಾನ್ಯ ಪ್ರದೇಶದಲ್ಲಿ ಶಾಂತಿಯ ಯುಗ ಆರಂಭವಾಗಿದೆ ಎಂದು ಠಾಕೂರ್ ಹೇಳಿದ್ದಾರೆ.

ಚಿತ್ರನಟ ದರ್ಶನ್ ಮೇಲೆ ಚಪ್ಪಲಿ ಎಸೆತ

ಬೆಂಗಳೂರು, ಡಿ. ೧೯: ಕ್ರಾಂತಿ ಚಿತ್ರದ ಪ್ರಚಾರದಲ್ಲಿ ತೊಡಗಿರುವ ಚಾಲೆಂಜಿAಗ್ ಸ್ಟಾರ್ ದರ್ಶನ್‌ಗೆ ಕೆಲ ಕಿಡಿಕೇಡಿಗಳು ಚಪ್ಪಲಿ ಎಸೆಯುವ ಮೂಲಕ ಅಗೌರವ ತೋರಿದ್ದು, ಇದು ಸ್ಯಾಂಡಲ್‌ವುಡ್‌ನಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹೊಸಪೇಟೆಯಲ್ಲಿ ನಡೆದ ಕಾರ್ಯಕ್ರಮದ ವೇಳೆ ದರ್ಶನ್ ಮೇಲೆ ದುಷ್ಕರ್ಮಿಗಳು ಚಪ್ಪಲಿ ಎಸೆದಿದ್ದಾರೆ. ಕ್ರಾಂತಿ ಚಿತ್ರದ ೨ನೇ ಹಾಡು ಬಳ್ಳಾರಿಯ ಹೊಸಪೇಟೆ ಪಟ್ಟಣದ ಡ್ಯಾಮ್ ರಸ್ತೆಯಲ್ಲಿರುವ ವಾಲ್ಮೀಕಿ ವೃತ್ತದಲ್ಲಿ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಹೊಸಪೇಟೆಯಲ್ಲಿ ಪುನಿತ್ ರಾಜಕುಮಾರ್ ಹಾಗೂ ದರ್ಶನ್ ಅಭಿಮಾನಿಗಳ ನಡುವೆ ಜಗಳ ಶುರುವಾಗಿತ್ತು. ಕ್ರಾಂತಿ ಚಿತ್ರದ ಪೋಸ್ಟರ್‌ಗಳನ್ನು ಅಪ್ಪು ಅಭಿಮಾನಿಗಳು ಹರಿದುಹಾಕಿ ಅಪ್ಪು ಕಟ್‌ಔಟ್ ಹಿಡಿದು ಅಪ್ಪುಗೆ ಜೈಕಾರ ಹಾಕಿ ವೇದಿಕೆ ಏರಿದ್ದರು. ಇದರ ಹೊರತಾಗಿಯೂ ದರ್ಶನ್ ಅಪ್ಪು ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ನಂತರ ಕಾರ್ಯಕ್ರಮ ಶುರುವಾಯಿತು. ವೇದಿಕೆ ಮೇಲೆ ರಚಿತಾ ರಾಮ್ ಚಿತ್ರದ ಕುರಿತು ಮಾತನಾಡುತ್ತಿದ್ದಾಗ ಯಾರೋ ಕಿಡಿಗೇಡಿ ದರ್ಶನ್ ಮೇಲೆ ಚಪ್ಪಲಿ ಎಸೆದಿದ್ದಾನೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಅರ್ಜೆಂಟೀನಾ ಗೆಲುವಿನ ಬಳಿಕ ಕೇರಳದಲ್ಲಿ ಹಿಂಸಾಚಾರ

ತಿರುವನAತಪುರA, ಡಿ. ೧೯: ಫೀಫಾ ವಿಶ್ವಕಪ್-೨೦೨೨ರಲ್ಲಿ ಅರ್ಜೆಂಟೀನಾ ಗೆಲುವಿನ ಬಳಿಕ ಕೇರಳದಲ್ಲಿ ಹಿಂಸಾಚಾರ ವರದಿಯಾಗಿದೆ. ಭಾನುವಾರ ರಾತ್ರಿ ಅರ್ಜೆಂಟೀನ ಗೆಲುವನ್ನು ಸಂಭ್ರಮಿಸುತ್ತಿದ್ದಾಗ ಹಿಂಸಾಚಾರ ನಡೆದಿದ್ದು, ಪರಿಸ್ಥಿತಿ ಕೈ ಮೀರಿತ್ತು. ಕಣ್ಣೂರು ಜಿಲ್ಲೆಯಲ್ಲಿ ೨ ಪ್ರಕರಣಗಳು ದಾಖಲಾಗಿ ೬ ಮಂದಿ ಬಂಧನಕ್ಕೊಳಗಾಗಿದ್ದಾರೆ. ಓರ್ವ ವ್ಯಕ್ತಿಗೆ ಕಾಲಿನಲ್ಲಿ ಇರಿತದ ಗಾಯಗಳಾಗಿದೆ. ಮತ್ತೊಂದು ಘಟನೆಯಲ್ಲಿ ತಲಶ್ಶೇರಿಯಲ್ಲಿ ಪೊಲೀಸ್ ಅಧಿಕಾರಿಗೆ ಗಾಯಗಳಾಗಿದೆ ಎಂದು ಹಿರಿಯ ವಿಶೇಷ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಘಟನೆಗೆ ಸಂಬAಧಿಸಿದAತೆ ೬ ಮಂದಿಯನ್ನು ಬಂಧಿಸಲಾಗಿದ್ದು, ೫ ಮಂದಿಯಿದ್ದ ತಂಡ ಕಲೂರ್ ಜಂಕ್ಷನ್‌ನಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯ ಮೇಲೆ ದಾಳಿ ನಡೆಸಿವೆ. ರಸ್ತೆ ತಡೆದು ಸಂಭ್ರಮಾಚರಣೆ ನಡೆಸುತ್ತಿದ್ದನ್ನು ವಿರೋಧಿಸಿದ್ದಕ್ಕೆ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ನಡೆದಿದೆ ಎಂದು ಪೊಲೀಸ್ ಇಲಾಖೆ ಹೇಳಿದೆ.

ಜೆಡಿಎಸ್‌ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಬೆಂಗಳೂರು, ಡಿ. ೧೯: ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದ್ದು, ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಪಟ್ಟಿಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ಹೆಸರಿದ್ದು, ನಿಖಿಲ್ ಕುಮಾರಸ್ವಾಮಿ ಹಾಗೂ ಹೆಚ್.ಡಿ. ಕುಮಾರಸ್ವಾಮಿ ರಾಮನಗರ ಹಾಗೂ ಚನ್ನಪಟ್ಟಣದಿಂದ ಸ್ಪರ್ಧಿಸಲಿದ್ದಾರೆ. ಪಕ್ಷದ ಕಚೇರಿಯಲ್ಲಿ ಹೆಚ್‌ಡಿಕೆ ಜೊತೆ ಜಂಟಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜೆಡಿಎಸ್ ಪಕ್ಷದ ಅಧ್ಯಕ್ಷ ಸಿಎಂ ಇಬ್ರಾಹಿಮ್ ೯೩ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.

ಸಾವರ್ಕರ್ ಭಾವಚಿತ್ರ ಅನಾವರಣ : ಕಾಂಗ್ರೆಸ್ ಧರಣಿ

ಬೆಳಗಾವಿ, ಡಿ. ೧೯: ರಾಜ್ಯ ಸರ್ಕಾರ ಸುವರ್ಣಸೌಧದ ವಿಧಾನಸಭೆಯಲ್ಲಿ ವೀರ ಸಾವರ್ಕರ್ ಭಾವಚಿತ್ರವನ್ನು ಅನಾವರಣ ಮಾಡಿದೆ. ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಾವರ್ಕರ್ ಫೋಟೋವನ್ನು ಅನಾವರಣ ಮಾಡಲಾಗಿದೆ. ಸಾವರ್ಕರ್ ಜೊತೆಗೆ ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ನೇತಾಜಿ, ಸರ್ದಾರ್ ವಲ್ಲಭ್ ಬಾಯ್ ಪಟೇಲ್, ಸ್ವಾಮಿ ವಿವೇಕಾನಂದ, ಬಸವಣ್ಣರ ಫೋಟೋಗಳನ್ನೂ ಕೂಡ ಇದೇ ವೇಳೆ ಅನಾವರಣ ಮಾಡಲಾಗಿದೆ. ವೀರ ಸಾವರ್ಕರ್ ಅವರ ಫೋಟೋವನ್ನು ವಿಧಾನಸಭೆಯಲ್ಲಿ ಅನಾವರಣಗೊಳಿಸಿದ್ದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಈ ಸಂಬAಧ ಸುವರ್ಣಸೌಧದ ಮೆಟ್ಟಿಲುಗಳ ಮೇಲೆ ಪ್ರತಿಭಟನೆ ನಡೆಸುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ವಿಧಾನಸಭೆ ಕಲಾಪ ನಡೆಯಬಾರದು ಎಂಬುದು ಅವರ ಅಪೇಕ್ಷೆ. ಕಲಾಪ ಅಡ್ಡಿಪಡಿಸಲು ಬಯಸುತ್ತಿದ್ದಾರೆ. ಸರ್ಕಾರದ ವಿರುದ್ಧ ಸಾಕಷ್ಟು ಭ್ರಷ್ಟಾಚಾರ ವಿಚಾರಗಳನ್ನು ಎತ್ತಲಿದ್ದೇವೆ ಎಂಬ ಕಾರಣಕ್ಕೆ ಫೋಟೋ ವಿಚಾರವನ್ನು ತಂದಿದ್ದಾರೆ. ಸರ್ಕಾರ ಬಳಿ ಯಾವುದೇ ಅಭಿವೃದ್ಧಿ ಅಜೆಂಡಾ ಇಲ್ಲ ಎಂದು ಕಿಡಿಕಾರಿದ್ದಾರೆ.