ನಾಪೋಕ್ಲು, ಡಿ. ೧೯: ಸಮೀಪದ ಬೇತು ಗ್ರಾಮದ ಮಕ್ಕಿ ಶ್ರೀ ಶಾಸ್ತಾವು ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ ನೆರವೇರಿತು. ತಾ. ೧೯ ರಂದು ದೇವಾಲಯದ ಆವರಣದಲ್ಲಿ ನಡೆದ ಎರಡು ತೆರೆಗಳೊಂದಿಗೆ ಉತ್ಸವ ಶ್ರದ್ಧಾ ಭಕ್ತಿಯಿಂದ ಸಂಪನ್ನಗೊAಡಿತು.
ಮಕ್ಕಿ ಶ್ರೀ ಶಾಸ್ತಾವು ಸನ್ನಿಧಿಯಲ್ಲಿ ಸೋಮವಾರ ಬೆಳಗ್ಗಿನಿಂದಲೇ ವಿವಿಧ ದೈವಗಳ ಕೋಲ (ತೆರೆ) ಬೆಳಿಗ್ಗೆ ಅಜ್ಜಪ್ಪ ಕೋಲ ಹಾಗೂ ವಿಷ್ಣುಮೂರ್ತಿ ನಡೆದವು. ಭಕ್ತರು ಅಧಿಕ ಸಂಖ್ಯೆಯಲ್ಲಿ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಭಕ್ತರಿಂದ ದೇವರಿಗೆ ವಿವಿಧ ರೀತಿಯ ಹರಕೆಗಳನ್ನು ಸಲ್ಲಿಸಲಾಯಿತು. ಭಕ್ತರಿಗೆ ಅನ್ನದಾನ ಏರ್ಪಡಿಸಲಾಗಿತ್ತು. ಇದಕ್ಕೂ ಮೊದಲು ಭಾನುವಾರ ರಾತ್ರಿ ದೀಪಾರಾಧನೆ (ಅಂದಿಬೊಳಕ್) ನಡೆಯಿತು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷ, ನಿರ್ದೇಶಕರು ಹಾಗೂ ತಕ್ಕಮುಖ್ಯಸ್ಥರು ವಾರ್ಷಿಕ ಉತ್ಸವದ ನೇತೃತ್ವ ವಹಿಸಿದ್ದರು. ಅರ್ಚಕ ಮಕ್ಕಿ ದಿವಾಕರ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.