ಕುಶಾಲನಗರ, ಡಿ. ೧೯: ಕಳೆದ ಹದಿನೈದು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕುಶಾಲನಗರ ತಾಲೂಕು ಕೇಂದ್ರದಲ್ಲಿರುವ ಸಾಂಸ್ಕೃತಿಕ ಭವನವನ್ನು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಪರಿಶೀಲಿಸಿದರು.
ಈ ಸಂದರ್ಭ ಅಧ್ಯಕ್ಷರಿಗೆ ಕುಶಾಲ ನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮನವಿ ಪತ್ರ ಸಲ್ಲಿಸಿ ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅಗತ್ಯ ಅನುದಾನವನ್ನು ಬಿಡುಗಡೆಗೊಳಿಸುವಂತೆ ನೀಡಿದ ಮನವಿ ಪತ್ರ ಸ್ವೀಕರಿಸಿದ ಅಧ್ಯಕ್ಷರು, ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಯುಕ್ತರಿಗೆ ಸೂಕ್ತ ಅನುದಾನ ಬಿಡುಗಡೆಗೆ ಪತ್ರ ಬರೆಯಲಾಗುವುದು. ಹಾಗೆಯೇ ಗಡಿ ಪ್ರಾಧಿಕಾರದ ವತಿಯಿಂದಲೂ ಪರಿಶೀಲನೆ ನಡೆಸಿ ಅನುದಾನ ಒದಗಿಸುವುದಾಗಿ ಡಾ. ಸೋಮಶೇಖರ್ ಹೇಳಿದರು. ಈ ಸಂದರ್ಭ ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್. ಮೂರ್ತಿ ಇದ್ದರು.