ಮಡಿಕೇರಿ, ಡಿ. ೧೯: ಮಡಿಕೇರಿಯ ದೇಚೂರು ಕೊಡವಕೇರಿ ಸಂಘದ ಪುತ್ತರಿ ಒತ್ತೋರ್ಮೆ ಕೂಟ ಹಾಗೂ ವಾರ್ಷಿಕ ಮಹಾಸಭೆ ತಾ. ೨೩ ರಂದು ಮಡಿಕೇರಿ ಕೊಡವ ಸಮಾಜ ಸಭಾಂಗಣದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ ೯ ರಿಂದ ಸಂಘದ ಅಧ್ಯಕ್ಷ ಮೂವೆರ ಕೆ. ಜಯರಾಮ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾವೇರಿಪೂಜೆ, ಆಟೋಟ ಸ್ಪರ್ಧೆ, ಸಭಾ ಕಾರ್ಯಕ್ರಮ, ಸನ್ಮಾನ ಮತ್ತಿತರ ಕಾರ್ಯಕ್ರಮ ಜರುಗಲಿದ್ದು, ಮುಖ್ಯ ಅತಿಥಿಗಳಾಗಿ ಕೊಡವ ಸಮಾಜದ ಅಧ್ಯಕ್ಷ ಮಂಡುವAಡ ಪಿ. ಮುತ್ತಪ್ಪ ಅವರು ಪಾಲ್ಗೊಳ್ಳಲಿದ್ದಾರೆ.