ಮಡಿಕೇರಿ, ಡಿ. ೧೯: ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಗ್ರಾಮಾಭಿವೃದ್ಧಿ ಯೋಜನೆ ಯಡಿಯಲ್ಲಿ ಪೊನ್ನಂಪೇಟೆ ತಾಲೂಕು ಹರಿಹರ ಗ್ರಾಮದ ಶ್ರೀ ಬೆಟ್ಟಚಿಕ್ಕಮ್ಮ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಎರಡು ಲಕ್ಷ ದೇಣಿಗೆಯನ್ನು ಯೋಜನೆಯ ಜಿಲ್ಲಾ ನಿರ್ದೇಶಕಿ ಲೀಲಾವತಿ ಸಮಿತಿಯ ಅಧ್ಯಕ್ಷರಾದ ಎಂ.ಪಿ. ವೇಣು ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭ ವೀರಾಜಪೇಟೆ ತಾಲೂಕು ಯೋಜನಾಧಿಕಾರಿ ದಿನೇಶ್ ಬಿ., ಪೊನ್ನಂಪೇಟೆ ವಲಯ ಮೇಲ್ವಿಚಾರಕ ನರಸಿಂಹಮೂರ್ತಿ, ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಅರುಣ್ ಕುಮಾರ್, ಟಿ. ಶೆಟ್ಟಿಗೇರಿ ವಲಯ ಒಕ್ಕೂಟದ ಅಧ್ಯಕ್ಷೆ ಸುಶೀಲ ಮತ್ತು ಪದಾಧಿಕಾರಿಗಳು ಮತ್ತು ಊರಿನ ಗಣ್ಯರು ಉಪಸ್ಥಿತರಿದ್ದರು.

ಧರ್ಮಸ್ಥಳದ ಯೋಜನಾಧಿಕಾರಿಗಳನ್ನು ದೇವಸ್ಥಾನದ ಸಮಿತಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.