ಸೋಮವಾರಪೇಟೆ, ಡಿ. ೧೯: ಸಮೀಪದ ಸಿದ್ಧಲಿಂಗಪುರ-ಅರಸಿನಕುಪ್ಪೆ ಗ್ರಾಮದಲ್ಲಿರುವ ಶ್ರೀ ಮಂಜುನಾಥ ಸ್ವಾಮಿ ಮತ್ತು ನವನಾಗನಾಥ ಕ್ಷೇತ್ರದಲ್ಲಿ ಒಂದು ತಿಂಗಳ ಕಾಲ ನಡೆಯುವ ಧನುರ್ಮಾಸ ಪೂಜೆ ಆರಂಭ ಗೊಂಡಿದ್ದು, ಕ್ಷೇತ್ರದ ಪ್ರಧಾನ ಗುರುಗಳಾದ ಶ್ರೀರಾಜೇಶ್ನಾಥ್ಜೀ ಅವರ ನೇತೃತ್ವದಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ.
ಪ್ರತಿದಿನ ಬೆಳಿಗ್ಗೆ ೪.೧೫ ರಿಂದ ೫.೩೦ ರವರೆಗೆ ಮಂಜುನಾಥ ದೇವಾಲಯದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕ ಜಗದೀಶ್ ಉಡುಪ ಪೌರೋಹಿತ್ವದಲ್ಲಿ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ, ಧನುರ್ಮಾಸದ ವಿಶೇಷ ಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯುತ್ತಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಮೋಹನ್ ತಿಳಿಸಿದ್ದಾರೆ.