ಸೋಮವಾರಪೇಟೆ, ಡಿ. ೧೯: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮುಖ್ಯ ಶಿಕ್ಷಕರ ಸಂಘ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ವತಿಯಿಂದ ಇಲ್ಲಿಗೆ ಸಮೀಪದ ನೇರುಗಳಲೆ ಪ್ರೌಢಶಾಲೆಯಲ್ಲಿ ತಾಲೂಕಿನ ಆಂಗ್ಲ ಭಾಷಾ ಶಿಕ್ಷಕರಿಗೆ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ವಿ. ಸುರೇಶ್ ಮಾತನಾಡಿ, ಹತ್ತನೇ ತರಗತಿ ಫಲಿತಾಂಶ ಸುಧಾರಣೆಗಾಗಿ ಇಂತಹ ಕಾರ್ಯಾಗಾರಗಳು ಅತ್ಯವಶ್ಯಕ ಎಂದರು. ಪ್ರತಿಯೊಬ್ಬ ಶಿಕ್ಷಕರು ಇದರ ಪ್ರಯೋಜನವನ್ನು ಪಡೆದು ವಿದ್ಯಾರ್ಥಿಗಳಿಗೆ ತಲುಪಿಸಲು ಪ್ರಯತ್ನಿಸಬೇಕೆಂದರು.

ನೇರುಗಳಲೆ ಪ್ರೌಢಶಾಲಾ ಮುಖ್ಯ ಶಿಕ್ಷಕ ಕೃಷ್ಣೇಗೌಡ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಧರ್ಮಪ್ಪ, ಸಂಪನ್ಮೂಲ ವ್ಯಕ್ತಿಗಳಾದ ಮಂಜುನಾಥ ಮತ್ತು ಅಣ್ಣಪ್ಪ ಶೆಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿ ಹೇಮಂತ್, ಶಿಕ್ಷಕರ ಸಂಘದ ಪದಾಧಿಕಾರಿಗಳಾದ ರತ್ನ ಕುಮಾರ್, ಯಶ್‌ವಂತ್ ಕುಮಾರ್, ಪೂವಯ್ಯ, ನಾಗರಾಜು, ತಾಲೂಕು ದೈಹಿಕ ಶಿಕ್ಷಣ ಅಧೀಕ್ಷಕರು, ಬಿ.ಆರ್.ಪಿ ಹಾಗೂ ಇ.ಸಿ.ಓ ಉಪಸ್ಥಿತರಿದ್ದರು.