ಸೋಮವಾರಪೇಟೆ, ಡಿ. ೨೦: ಸಮಾಜದಲ್ಲಿ ನಡೆಯುವ ಅಪರಾಧ ಕೃತ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿದ್ಯಾರ್ಥಿಗಳೂ ಸಹ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಇಲ್ಲಿನ ಪೊಲೀಸ್ ಇನ್ಸ್ಪೆಕ್ಟರ್ ರಾಮಚಂದ್ರನಾಯಕ್ ಕರೆ ನೀಡಿದರು.
ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ರಸ್ತೆ ಸುರಕ್ಷಾ ಸಪ್ತಾಹವನ್ನು ಉದ್ಘಾಟಿಸಿ, ನಂತರ ಚನ್ನಬಸಪ್ಪ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಪಾಠ ಪ್ರವಚನದೊಂದಿಗೆ ತಮ್ಮ ಸುತ್ತಮುತ್ತಲ ಸಮಾಜದಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆಯೂ ಗಮನ ಹರಿಸಬೇಕು. ಕಾನೂನುಗಳ ಬಗ್ಗೆಯೂ ತಿಳುವಳಿಕೆ ಹೊಂದಿಕೊಳ್ಳಬೇಕು. ಕಾನೂನು ಬಾಹಿರ ಕೃತ್ಯಗಳು ಕಂಡುಬAದರೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕೆಂದು ರಾಮಚಂದ್ರ ನಾಯಕ್ ಕರೆ ನೀಡಿದರು.
ಪೋಕ್ಸೋ ಕಾಯ್ದೆ, ಮಾದಕ ವಸ್ತು ನಿಷೇಧ ಕಾಯ್ದೆ, ಸೈಬರ್ ಕ್ರೆöÊಂಗಳ ಬಗ್ಗೆ ತಿಳುವಳಿಕೆ ನೀಡಿದ ಇನ್ಸ್ಪೆಕ್ಟರ್, ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ತಹಶೀಲ್ದಾರ್ ಎಸ್.ಎನ್. ನರಗುಂದ್, ಕಾಲೇಜು ಪ್ರಾಂಶುಪಾಲ ಬೆಳ್ಳಿಯಪ್ಪ, ಪೊಲೀಸ್ ಠಾಣಾಧಿಕಾರಿ ರಮೇಶ್ಕುಮಾರ್, ಜಿ.ಎಂ.ಪಿ. ಶಾಲಾ ಮುಖ್ಯೋಪಾಧ್ಯಾಯಿನಿ ಅಣ್ಣಮ್ಮ ಸೇರಿದಂತೆ ಇತರರು ಭಾಗವಹಿಸಿದ್ದರು.
ಇದಕ್ಕೂ ಮುನ್ನ ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪೊಲೀಸ್ ಸಿಬ್ಬಂದಿಗಳೊAದಿಗೆ ಪಟ್ಟಣದಲ್ಲಿ ಜಾಗೃತಿ ಜಾಥಾ ನಡೆಸಿದರು. ಅಪರಾಧ ತಡೆ, ರಸ್ತೆ ಸುರಕ್ಷತೆಯ ಬಗ್ಗೆ ಘೋಷಣೆಗಳನ್ನು ಕೂಗುತ್ತಾ ಪಟ್ಟಣದ ಪ್ರಮುಖ ಮಾರ್ಗಗಳಲ್ಲಿ ಜಾಥಾ ನಡೆಸಿದರು.