ಮಡಿಕೇರಿ, ಡಿ. ೨೦: ಪೊನ್ನಂಪೇಟೆ ತಾಲೂಕಿನ ಕುಟ್ಟ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಮೊಹಿನುದ್ದೀನ್ ಕಾಂಗ್ರೆಸ್ ಪಕ್ಷವನ್ನು ತೊರೆದು ಜಾತ್ಯಾತೀತ ಜನತಾ ದಳಕ್ಕೆ ಸೇರ್ಪಡೆಯಾದರು.
ಇವರೊಂದಿಗೆ ಕಾಂಗ್ರೆಸ್ ಪ್ರಮುಖರಾದ ಹನೀಫ್ ಹಾಗೂ ಹಂಸ ಕೂಡ ಜೆಡಿಎಸ್ಗೆ ಸೇರ್ಪಡೆಗೊಂಡರು.
ಈ ಸಂದರ್ಭ ಜೆಡಿಎಸ್ ಉಪಾಧ್ಯಕ್ಷ ಕೆ.ಎಂ.ಬಿ. ಗಣೇಶ್, ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಇಸಾಖ್ ಖಾನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಸಿ. ಸುನಿಲ್, ರಾಜ್ಯ ಸಂಘಟನಾ ಕಾರ್ಯದರ್ಶಿ ಮನ್ಸೂರ್ ಆಲಿ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಯೂಸುಫ್ ಕೊಂಡAಗೇರಿ, ಕಾರ್ಯದರ್ಶಿ ಬಲ್ಲಚಂಡ ಗೌತಮ್, ಯುವ ಘಟಕದ ತಾಲೂಕು ಅಧ್ಯಕ್ಷ ಆಲಿ, ಕುಟ್ಟ ವಿಭಾಗದ ಮುಖಂಡ ರೆನ್ನಿ, ಪೊನ್ನಂಪೇಟೆ ತಾಲೂಕು ಅಧ್ಯಕ್ಷ ಪರ್ಮಲೆ ಗಣೇಶ್, ಮಜೀದ್, ಹನೀಫ್ ಮತ್ತಿತರರು ಉಪಸ್ಥಿತರಿದ್ದರು.