ಕುಶಾಲನಗರ, ಡಿ.೨೦, ಪೊಲೀಸ್ ಸಿಬ್ಬಂದಿ ಒಬ್ಬರ ಮೇಲೆ ಹಲ್ಲೆ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕನನ್ನು ಬಂಧಿಸಲಾಗಿದೆ.

ಮೂಲತಃ ಕುಶಾಲನಗರ ಸಮೀಪದ ಕೂಡಿಗೆಯ ನಿವಾಸಿ ನಾಪೋಕ್ಲು ಬೇತು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಕೆ.ಜಿ. ನಾಗೇಂದ್ರ ಬಂಧಿತ ಆರೋಪಿ. ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸುವುದರೊAದಿಗೆ ಠಾಣೆಯಲ್ಲಿದ್ದ ಪೊಲೀಸ್ ಸಿಬ್ಬಂದಿ ಯೋಗೇಶ್ ಎಂಬವರ ಮೇಲೆ ನಾಗೇಂದ್ರ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಮೊಕ್ಕದಮೆ ದಾಖಲಾಗಿತ್ತು. ಆರೋಪಿ ನಾಗೇಂದ್ರ ಪತ್ನಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಸೇವೆಯಲ್ಲಿದ್ದು, ನಾಗೇಂದ್ರ ಠಾಣೆಗೆ ಬಂದು ಸಿಬ್ಬಂದಿಗಳಿಗೆ ಅನಾವಶ್ಯಕ ಕಿರುಕುಳ ನೀಡುತ್ತಿದ್ದ ಎನ್ನುವ ಆರೋಪಗಳು ಕೇಳಿಬಂದಿವೆ.

ಪ್ರಕರಣಕ್ಕೆ ಸಂಬAಧಿಸಿದAತೆ ಕುಶಾಲನಗರ ಪಟ್ಟಣ ಠಾಣೆ ಪೊಲೀಸರು ಶಿಕ್ಷಕ ನಾಗೇಂದ್ರನನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.