ಮಡಿಕೇರಿ, ಡಿ. ೨೦: ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ಡಿ ಅಧ್ಯಯನದಲ್ಲಿ ತೊಡಗಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-೧, ೨(ಎ), ೩(ಎ) ಹಾಗೂ ೩(ಬಿ) ಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ-ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ.
೨೦೨೨-೨೩ನೇ ಸಾಲಿನಲ್ಲಿ ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯಗಳಲ್ಲಿ, ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್‌ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ೨೦೨೩ ರ ಜನವರಿ ೧೩ ಕೊನೆಯ ದಿನವಾಗಿದೆ.
ವಿದ್ಯಾರ್ಥಿಯು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಮಾಸಿಕ ವ್ಯಾಸಂಗ ವೇತನ/ ಫೆಲೋಶಿಪ್‌ಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ನಿಗದಿಪಡಿಸಿರುವ ವಾರ್ಷಿಕ ಆದಾಯ ಮಿತಿ ಪ್ರವರ್ಗ-೧ ರೂ. ೪.೫೦ ಲಕ್ಷ, ಪ್ರವರ್ಗ-೨ಎ, ೩ಎ, ೩ಬಿ ರೂ.೩.೫೦ ಲಕ್ಷ. ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಟ ಶೇ. ೫೫ ಅಂಕಗಳನ್ನು ಪಡೆದಿರಬೇಕು. ವಿಶ್ವವಿದ್ಯಾಲಯ, ಅಧಿಕೃತ ಸಂಸ್ಥೆಗಳಲ್ಲಿನ ಸಂಶೋಧನಾ ಮಾರ್ಗದರ್ಶಕರಡಿಯಲ್ಲಿ ಪಿಎಚ್‌ಡಿ ಅಧ್ಯಯನಕ್ಕಾಗಿ ನೋಂದಣಿ ಮಾಡಿಕೊಂಡಿರಬೇಕು.
ವಿದ್ಯಾರ್ಥಿಗಳು ಆನ್‌ಲೈನ್ ಅರ್ಜಿ ಪ್ರತಿ ಹಾಗೂ ದೃಢೀಕೃತ ದಾಖಲೆಗಳನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಮ್ಯಾನ್ಸ್ ಕಾಂಪೌAಡ್ ಹತ್ತಿರ, ದೇವರಾಜ ಅರಸು ಭವನ, ಮಡಿಕೇರಿ ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ವಿವರಗಳು ಇಲಾಖಾ ವೆಬ್‌ಸೈಟ್ hಣಣಠಿs://ತಿತಿತಿ.bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಲಭ್ಯ ಇರುತ್ತದೆ. ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೪ (ಕಚೇರಿ ಕಾರ್ಯನಿರ್ವಹಿಸುವ ಸಮಯ ಬೆಳಿಗ್ಗೆ ೧೦ ರಿಂದ ಸಂಜೆ ೫.೩೦ ರವರೆಗೆ ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ) ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.