ಪೆರಾಜೆ, ಡಿ. ೨೧: ಜಿಲ್ಲಾಡಳಿತ, ಗ್ರಾಮ ಪಂಚಾಯಿತಿ ಪೆರಾಜೆ ಹಾಗೂ ಕಂದಾಯ ಇಲಾಖೆ ಪೆರಾಜೆ ಸಹಯೋಗದೊಂದಿಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಡಿ ಅಪರ ಜಿಲಾಧಿಕಾರಿ ಹಾಗೂ ತಹಶೀಲ್ದಾರರು ಹಾಗೂ ವಿವಿಧ ಅಧಿಕಾರಿಗಳ ಗ್ರಾಮ ಭೇಟಿ ಕಾರ್ಯಕ್ರಮವು ಪೆರಾಜೆಯ ಅನ್ನಪೂರ್ಣೇಶ್ವರಿ ಕಲಾಮಂದಿರದಲ್ಲಿ ನಡೆಯಿತು.
ಈ ಸಂದರ್ಭ ಸಾಮಾಜಿಕ ಭದ್ರತೆ ಯೋಜನೆಯಡಿ ಪಲಾನುಭವಿಗಳಿಗೆ ಪಿಂಚಣಿ ಆದೇಶ ಪತ್ರಗಳನ್ನು ವಿತರಿಸಲಾಯಿತು. ಗ್ರಾಮಸ್ಥರು ಗ್ರಾಮದ ಜಾಗದ ಸಮಸ್ಯೆಗಳು, ಪಹಣಿ ದುರಸ್ತಿ, ಪಹಣಿಯಲ್ಲಿನ ಜಂಟಿ ಖಾತೆಗಳ ಸಮಸ್ಯೆಗಳು, ಕೋವಿ ಲೈಸನ್ಸ್ ರಿನೀವಲ್, ಚುನಾವಣಾ ಸಮಯದಲ್ಲಿ ಕೋವಿ ಡೆಪಾಸಿಟ್ ಇಡುವ ಬಗ್ಗೆ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ಗ್ರಾಮದ ವಿದ್ಯುತ್ ಸಮಸ್ಯೆಗಳು, ದಾರಿ ಸಮಸ್ಯೆ, ರೈತರು ಬೆಳೆದ ಬೆಳೆಗಳಿಗೆ ಮಂಗಗಳ ಹಾವಳಿ, ಸೇರಿದಂತೆ ಗ್ರಾಮಸ್ಥರು ತಮ್ಮ ಕುಂದುಕೊರತೆಗಳ ಬಗ್ಗೆ ನೇರವಾಗಿ ಇಲಾಖಾ ಅಧಿಕಾರಿಗಳ ಜೊತೆ ಚರ್ಚಿಸಿದರು ಮತ್ತು ಅಹವಾಲುಗಳನ್ನು ನೀಡಿದರು.
ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ನಂಜುAಡೆ ಗೌಡ, ತಹಶೀಲ್ದಾರ್ ಮಹೇಶ್, ಉಪ ತಹಶೀಲ್ದಾರ್ ವೆಂಕಟಾಚಲ, ಆರ್.ಎಫ್.ಓ. ಮಧುಸೂದನ್, ಅಬಕಾರಿ ಇನ್ಸ್ಪೆಕ್ಟರ್ ಸ್ವರ್ಣಶ್ರೀ, ಮಡಿಕೇರಿ ತಾಲೂಕು ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಸದಸ್ಯ ಸುಬ್ರಮಣ್ಯ ಉಪಾಧ್ಯಾಯ, ಪೆರಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದ್ರಕಲಾ ಬಳ್ಳಡ್ಕ, ಉಪಾಧ್ಯಕ್ಷೆ ಜಯಲಕ್ಷಿö್ಮ ಧರಣೀದರ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಕಂದಾಯ ಪರಿವೀಕ್ಷಕರು, ಗ್ರಾಮ ಲೆಕ್ಕಿಗರು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷ, ಪದಾಧಿಕಾರಿಗಳು, ಸದಸ್ಯರುಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.