ಸೋಮವಾರಪೇಟೆ, ಡಿ. ೨೧ : ಭಾರೀ ಹೋರಾಟಕ್ಕೆ ನಾಂದಿಯಾಗಿದ್ದ ಮಸಗೋಡು-ಕಣಿವೆ ರಸ್ತೆ ಅಭಿವೃದ್ಧಿಗೆ ಕೊನೆಗೂ ಅನುದಾನ ಬಿಡುಗಡೆಗೊಂಡಿದೆ. ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅವರ ಬೇಡಿಕೆಗೆ ಮುಖ್ಯಮಂತ್ರಿ ಸಕಾರಾತ್ಮಕ ಸ್ಪಂದನ ನೀಡಿದ್ದು, ಹಣಕಾಸು ಇಲಾಖೆಯಿಂದ ೫ ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ.

ಈ ಬಗ್ಗೆ ‘ಶಕ್ತಿ’ಗೆ ಮಾಹಿತಿ ನೀಡಿದ ಶಾಸಕ ಅಪ್ಪಚ್ಚುರಂಜನ್ ಅವರು, ಲೋಕೋಪಯೋಗಿ ಇಲಾಖಾ ಸಚಿವರಿಗೆ ಈ ಹಿಂದೆಯೇ ರಸ್ತೆ ಅಭಿವೃದ್ಧಿಗೆ ಸಂಬAಧಿಸಿದAತೆ ಮನವಿ ಮಾಡಲಾಗಿದ್ದು, ಕ್ರಿಯಾಯೋಜನೆ ಸಲ್ಲಿಸಲಾಗಿತ್ತು. ಇದೀಗ ರಾಜ್ಯದ ಮುಖ್ಯಮಂತ್ರಿಗಳ ಗಮನ ಸೆಳೆದು, ರಸ್ತೆ ಅಭಿವೃದ್ಧಿಯ ಬಗ್ಗೆ ಮನವರಿಕೆ ಮಾಡಿಕೊಟ್ಟ ಮೇರೆ ಹಣಕಾಸು ಇಲಾಖೆಯಿಂದ ೫ ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ ಎಂದರು.

ಬೆಳಗಾವಿ ಅಧಿವೇಶನದಲ್ಲಿ ಭಾಗಿಯಾಗಿರುವ ಶಾಸಕರು, ರಸ್ತೆಗೆ ಸಂಬAಧಿಸಿದAತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಮಾತುಕತೆ ನಡೆಸಿದ ಮೇರೆ, ತಕ್ಷಣ ವಿಶೇಷ ಅನುದಾನವನ್ನು ಹಣಕಾಸು ಇಲಾಖೆಯಿಂದ ಲೋಕೋಪಯೋಗಿ ಇಲಾಖೆಗೆ ಬಿಡುಗಡೆ ಮಾಡಿದ್ದಾರೆ. ಶೀಘ್ರದಲ್ಲೇ ಮಸಗೋಡು-ಕಣಿವೆ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಾರಂಭವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉದ್ದೇಶಿತ ರಸ್ತೆಯು ಹೊಂಡಾಗುAಡಿಗಳ

(ಮೊದಲ ಪುಟದಿಂದ) ಆಗರವಾಗಿದ್ದು, ವಾಹನಗಳ ಓಡಾಟಕ್ಕೆ ಭಾರೀ ಸಂಚಕಾರವಾಗಿದೆ. ಸೇತುವೆಯೂ ದುಸ್ಥಿತಿಯಲ್ಲಿದೆ. ರಸ್ತೆ ಅವ್ಯವಸ್ಥೆಯಿಂದಾಗಿ ಶಾಲಾ ಕಾಲೇಜು ವಾಹನಗಳು, ಖಾಸಗಿ ಬಸ್‌ಗಳು ಈ ರಸ್ತೆಯಲ್ಲಿ ತೆರಳುತ್ತಿಲ್ಲ. ಇದರಿಂದಾಗಿ ಸಾರ್ವಜನಿಕರು ಮಾತ್ರವಲ್ಲ; ಶಾಲಾ ಕಾಲೇಜು ವಿದ್ಯಾರ್ಥಿಗಳಿಗೂ ಸಮಸ್ಯೆಯಾಗಿದೆ.

ರಸ್ತೆಯನ್ನು ದುರಸ್ತಿಗೊಳಿಸದ ಇಲಾಖಾ ಕ್ರಮಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಗ್ರಾಮಸ್ಥರು, ಕಳೆದ ಅಕ್ಟೋಬರ್‌ನಲ್ಲಿ ಪಟ್ಟಣದಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದರು. ಎತ್ತಿನಗಾಡಿ ಯೊಂದಿಗೆ ಬೀದಿಗಿಳಿದು ಸರ್ಕಾರ ಹಾಗೂ ಲೋಕೋಪಯೋಗಿ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಆ ಸಂದರ್ಭ ಇಲಾಖೆಯ ಸಹಾಯಕ ಅಭಿಯಂತರ ನಾಗರಾಜ್ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ನವೆಂಬರ್ ಅಂತ್ಯದೊಳಗೆ ಕಾಮಗಾರಿ ಆರಂಭಿಸುವ ಭರವಸೆ ನೀಡಿದ್ದರು.

ಇದಾದ ಕೆಲ ಸಮಯದಲ್ಲಿ ಭಾರೀ ಗುಂಡಿ ಬಿದ್ದ ಸ್ಥಳಗಳಲ್ಲಿ ವೆಟ್‌ಮಿಕ್ಸ್ ಹಾಕಿ ಗುಂಡಿಗಳನ್ನು ಮುಚ್ಚಲಾಗಿತ್ತು. ನಂತರ ಕೆಲಸ ಸ್ಥಗಿತಗೊಂಡಿತ್ತು. ಈ ನಡುವೆ ರಸ್ತೆ ಕಾಮಗಾರಿಗೆ ಸಂಬAಧಿಸಿದAತೆ ರೂಪುಗೊಂಡ ಮಸಗೋಡು-ಕಣಿವೆ ರಸ್ತೆ ಅಭಿವೃದ್ಧಿ ಹೋರಾಟ ಸಮಿತಿ ಪದಾಧಿಕಾರಿಗಳ ವಿರುದ್ಧ ಇಲಾಖೆಯ ಎಇಇ ಮಹೇಂದ್ರಕುಮಾರ್ ಅವರು ಪೊಲೀಸ್ ದೂರನ್ನೂ ನೀಡಿದ್ದರು. ಇಷ್ಟೆಲ್ಲಾ ಬೆಳವಣಿಗೆ ಆದರೂ ರಸ್ತೆಗೆ ಅನುದಾನ ಬಿಡುಗಡೆಯಾಗಿರಲಿಲ್ಲ. ಇದೀಗ ರಸ್ತೆ ಅಭಿವೃದ್ಧಿಗೆ ಸಂಬAಧಿಸಿದAತೆ ಶಾಸಕರ ಮನವಿಗೆ ಮುಖ್ಯಮಂತ್ರಿ ಸ್ಪಂದಿಸಿದ್ದು, ೫ ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ.

ಈ ಅನುದಾನದಲ್ಲಿ ಮಸಗೋಡಿ ನಿಂದ ಕಣಿವೆವರೆಗೆ ೧೮ ಕಿ.ಮೀ. ರಸ್ತೆ ಅಭಿವೃದ್ಧಿ ಸಾಧ್ಯವಿಲ್ಲ. ಶಾಸಕ ರಂಜನ್ ಅವರು ಈ ಹಿಂದೆ ಲೋಕೋಪ ಯೋಗಿ ಇಲಾಖೆಗೆ ಪತ್ರ ಬರೆದು ೧೫ ಕೋಟಿ ಅನುದಾನದ ಬೇಡಿಕೆಯಿ ಟ್ಟಿದ್ದರು. ಇದೀಗ ೫ ಕೋಟಿ ಅನುದಾನ ಬಿಡುಗಡೆಯಾಗಿದ್ದು, ಹೆಚ್ಚುವರಿ ಅನುದಾನ ಬಿಡುಗಡೆಗೂ ಕ್ರಮವಹಿಸ ಬೇಕಾಗಿದೆ ಎಂಬ ಅಭಿಪ್ರಾಯ ರಸ್ತೆ ಹೋರಾಟ ಸಮಿತಿಯ ಪದಾಧಿಕಾರಿಗಳಿಂದ ವ್ಯಕ್ತವಾಗಿದೆ.