*ಗೋಣಿಕೊಪ್ಪ, ಡಿ. ೨೧: ವೀರಾಜಪೇಟೆ ದಂತ ವೈದ್ಯಕೀಯ ಕಾಲೇಜಿನಲ್ಲಿ ವೀರಾಜಪೇಟೆ ಹೆಚ್.ಡಿ.ಎಫ್.ಸಿ. ಬ್ಯಾಂಕ್ ಮತ್ತು ಮಡಿಕೇರಿ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ನಡೆಸಲಾಯಿತು. ಶಿಬಿರವನ್ನು ಕಾಲೇಜಿನ ಪ್ರಾಂಶುಪಾಲ ಕೆ.ಸಿ. ಪೊನ್ನಪ್ಪ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿದರು.
ಸುಮಾರು ೧೦೦ಕ್ಕೂ ಹೆಚ್ಚು ಆಸಕ್ತರು ರಕ್ತದಾನ ಮಾಡಿದರು. ಹಾಸನ ಹೆಚ್.ಡಿ.ಎಫ್.ಸಿ. ಬ್ಯಾಂಕ್ ವ್ಯವಸ್ಥಾಪಕ ಸತೀಶ್ ಕುಮಾರ್ ಹೆಚ್.ಎನ್., ವೀರಾಜಪೇಟೆ ಶಾಖೆಯ ಎ.ಎಸ್. ಹರೀಶ್, ಮಾರುಕಟ್ಟೆ ವ್ಯವಸ್ಥಾಪಕ ಮೋಹಿತ್, ದಂತ ವೈದ್ಯಕೀಯ ಕಾಲೇಜಿನ ಉಪಪ್ರಾಂಶುಪಾಲ ಡಾ. ಜಿತೇಶ್ ಜೈನ್, ಡಾ. ರಾಧಿಕ, ಡಾ. ಪ್ರಿಯದರ್ಶಿನಿ, ರಕ್ತದಾನ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು.