ಮಡಿಕೇರಿ, ಡಿ. ೨೧ : ಸರ್ಕಾರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಮಾಹಿತಿ ನೀಡುವ ಸಂಬAಧ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಏರ್ಪಡಿಸಲಾಗಿರುವ ಬೀದಿನಾಟಕ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು.
ನಗರದ ಜಿಲ್ಲಾಡಳಿತ ಭವನ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಸರ್ಕಾರದ ಕಾರ್ಯಕ್ರಮಗಳ ಜೊತೆಗೆ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಂಬAಧಿಸಿದAತೆ ಜಾಗೃತಿ ಮೂಡಿಸುವಂತೆ ಸಲಹೆ ಮಾಡಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ ಮಾತನಾಡಿ ಸರ್ಕಾರ ರೈತ ವಿದ್ಯಾನಿಧಿ ಯೋಜನೆ, ಕಿಸಾನ್ ಸಮ್ಮಾನ್ ನಿಧಿ ಯೋಜನೆ, ಕೃಷಿ ಸಿಂಚಾಯಿ ಯೋಜನೆ, ಸಹಕಾರ ಸಂಘಗಳ ಮೂಲಕ ರೈತರಿಗೆ ಸಾಲ ವಿತರಣೆ, ಮನೆ ಮನೆಗೆ ಗಂಗೆ ಯೋಜನೆ, ರೈತ ಕುಟುಂಬಗಳಿಗೆ ಯಶಸ್ವಿನಿ ಆರೋಗ್ಯ ವಿಮೆ ಯೋಜನೆ, ನಮ್ಮ ಕ್ಲಿನಿಕ್, ವಿಶೇಷ ಘಟಕ ಯೋಜನೆ ಅನುಷ್ಠಾನ, ಸ್ವ ಸಹಾಯ ಗುಂಪುಗಳಿಗೆ ಸಹಾಯಧನ ಹೀಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಬಗ್ಗೆ ವಿವಿಧ ಗ್ರಾಮಗಳಿಗೆ ಸಂಚರಿಸಿ, ಬೀದಿ ನಾಟಕ ಮೂಲಕ ಮಾಹಿತಿ ನೀಡಲಾಗುತ್ತದೆ ಎಂದರು.
ಕಲಾವಿದ ಈ ರಾಜು ಮತ್ತು ತಂಡದವರು ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳ ಬಗ್ಗೆ ಹಾಡು ಹಾಡಿ ಗಮನ ಸೆಳೆದರು.