ಸುಂಟಿಕೊಪ್ಪ,ಡಿ.೨೧: ಕೊಡಗರಹಳ್ಳಿ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ವಾರ್ಷಿಕೋತ್ಸವ ಹಾಗೂ ಕ್ರೀಡಾಕೂಟವನ್ನು ತಾ.೨೨ ರಂದು (ಇಂದು) ಶಾಲಾವರಣದಲ್ಲಿ ಏರ್ಪಡಿಸಲಾಗಿದೆ.
ಶಾಲಾ ವಾರ್ಷಿಕ ಕ್ರೀಡಾಕೂಟವನ್ನು ಪೂರ್ವಾಹ್ನ ೧೦.೦೦ ಗಂಟೆಗೆ ಸುಂಟಿಕೊಪ್ಪ ಪಿ.ಎಂ.ಭರತ್ ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ ೧೦.೩೦ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ಪ್ರೌಢಶಾಲಾ ಬಾಲಕ, ಬಾಲಕಿಯರಿಗೆ, ಮಾಧ್ಯಮಿಕ ಶಾಲಾ ಬಾಲಕ, ಬಾಲಕಿಯರಿಗೆ, ಸಾರ್ವಜನಿಕ ಪುರುಷ ಮತ್ತು ಮಹಿಳೆಯರಿಗೆ ಹಾಗೂ ಪ್ರದರ್ಶನ ಕಬಡ್ಡಿ ಪಂದ್ಯಾಟಗಳನ್ನು ಆಯೋಜಿಸಲಾಗಿದೆ. ಸುಂಟಿಕೊಪ್ಪ, ೭ನೇಹೊಸಕೋಟೆ, ಕಂಬಿಬಾಣೆ, ಕೊಡಗರಹಳ್ಳಿ ತಂಡಗಳು ಪಾಲ್ಗೊಳ್ಳಲಿವೆ.
ಸಮಾರೋಪ ಸಮಾರಂಭ ಮಧ್ಯಾಹ್ನ ೩ ಗಂಟೆಗೆ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದು ಬಹುಮಾನ ವಿತರಣೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ಸುನೀತ್, ಶಾಲೆಯ ಹಳೆಯ ವಿದ್ಯಾರ್ಥಿ ಗ್ರಾ.ಪಂ.ಉಪಾಧ್ಯಕ್ಷ ಆರ್.ಡಿ.ಕವಿತ, ಸೋಮವಾರಪೇಟೆ ಕ.ರಾ.ಸ.ಪ್ರೌ.ಶಾ.ದೈ.ಶಿ. ಸಂಘದ ಅಧ್ಯಕ್ಷ ಲಕ್ಷö್ಮಣ್ ಆಗಮಿಸಲಿದ್ದಾರೆ.
ವಾರ್ಷಿಕೋತ್ಸವ ಸಮಾರಂಭದ ಉದ್ಘಾಟನೆಯನ್ನು ಕೂಡಿಗೆ ಡಯಟ್ ಉಪನಿರ್ದೇಶಕ (ಅಭಿವೃದ್ಧಿ) ಮಲ್ಲೇಶಪ್ಪ, ಕೊಡಗರಹಳ್ಳಿ ಎಜುಕೇಷನ್ ಸೊಸೈಟಿ ಗೌರವ ಕಾರ್ಯದರ್ಶಿ ಕೆ.ಎಸ್.ಮಂಜುನಾಥ್, ಪ್ರಧಾನ ಭಾಷಣಕಾರರಾಗಿ ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಸುರೇಶ್, ಮುಖ್ಯ ಅತಿಥಿಗಳಾಗಿ ಬೆಂಗಳೂರು ಸಾಯಿ ಭಾರತೀಯ ಮಹಿಳಾ ಹಾಕಿ ತಂಡದ ತರಬೇತಿದಾರರಾದ ಹೊನ್ನಂಪಾಡಿ ಅಂಕಿತ ಸುರೇಶ್, ಪಶುಪಾಲನ ಮತ್ತು ಪಶು ವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಡಾ. ಅಕ್ಕಪಂಡ ಬಿ.ತಮ್ಮಯ್ಯ ಆಗಮಿಸಲಿದ್ದಾರೆ.