ಚೆಟ್ಟಳ್ಳಿ, ಡಿ. ೨೧: ನಾಪೋಕ್ಲುವಿನಲ್ಲಿ ಜೆಡಿಎಸ್ ಕಾರ್ಯಕರ್ತರು ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಕುಮಾರಸ್ವಾಮಿ ಅವರ ಹುಟ್ಟುಹಬ್ಬ ಆಚರಿಸಿದರು.
ರಾಜ್ಯ ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಎಂ.ಎ. ಮನ್ಸೂರ್ ಆಲಿ ಅವರ ನೇತೃತ್ವದಲ್ಲಿ ಸ್ಥಳೀಯ ಬೇತು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ಹುಟ್ಟುಹಬ್ಬವನ್ನು ಆಚರಿಸಿದರು.
ಈ ಸಂದರ್ಭ ಜೆಡಿಎಸ್ ಮುಖಂಡರಾದ ಎಂ.ಎಸ್. ಇಬ್ರಾಹಿಂ, ಎಂ.ಹೆಚ್. ಅಬೂಬಕ್ಕರ್, ಎಂ.ಎಸ್. ಮಹಮ್ಮದ್ ಆಲಿ, ನಾಪೋಕ್ಲು ವಾಹನ ಚಾಲಕರ ಸಂಘದ ಅಧ್ಯಕ್ಷ ಎಂ.ಇ. ಅಬ್ದುಲ್ ರಜಾಕ್, ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಮಮತ, ಹಿರಿಯ ಶಿಕ್ಷಕಿ ಸಾವಿತ್ರಿ, ಸಹ ಶಿಕ್ಷಕ ಕೆ.ಜಿ. ನಾಗೇಂದ್ರ, ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.