‘ಮಾಸ್ಕ್ ಬಳಸಿ-ಕೋವಿಡ್ ಬೂಸ್ಟರ್ ಡೋಸ್ ತೆಗೆದುಕೊಳ್ಳಿ’
ನವದೆಹಲಿ, ಡಿ. ೨೧: ಭಾರತದ ಅರ್ಹ ಜನಸಂಖ್ಯೆಯ ಶೇ. ೨೭ ರಿಂದ ೨೮ ರಷ್ಟು ಜನರು ಮಾತ್ರ ಕೋವಿಡ್-೧೯ರ ಬೂಸ್ಟರ್ ಡೋಸ್ ಅನ್ನು ತೆಗೆದುಕೊಂಡಿದ್ದಾರೆ ಮತ್ತು ಜನನಿಬಿಡ ಸ್ಥಳಗಳಲ್ಲಿ ಜಾಗ್ರತೆ ವಹಿಸಲು ಮತ್ತು ಮಾಸ್ಕ್ ಧರಿಸಲು ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ. ವಿ.ಕೆ. ಪೌಲ್ ಸಲಹೆ ನೀಡಿದ್ದಾರೆ. ಜನರು ಭಯಭೀತರಾಗಬೇಡಿ ಎಂದ ಅವರು, ಅಂರ‍್ರಾಷ್ಟಿçÃಯ ವಿಮಾನ ಪ್ರಯಾಣದ ಮಾರ್ಗಸೂಚಿಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಜನಸಂದಣಿ ಇರುವ ಪ್ರದೇಶಗಳಲ್ಲಿ ಜನರು ಮಾಸ್ಕ್ ಧರಿಸಬೇಕು. ಹೃದಯ ರೋಗ, ಬಿಪಿ, ಉಸಿರಾಟದ ತೊಂದರೆ ಇರುವವರು ಅಥವಾ ವಯಸ್ಸಾದವರು ವಿಶೇಷವಾಗಿ ಇದನ್ನು ಅನುಸರಿಸಬೇಕು ಎಂದು ಪೌಲ್ ಹೇಳಿದರು. ಜಾಗತಿಕವಾಗಿ, ವಿಶೇಷವಾಗಿ ಚೀನಾದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದ ಮಧ್ಯೆ ಕೇಂದ್ರ ಆರೋಗ್ಯ ಸಚಿವ ಮನ್‌ಲುಖ್ ಮಾಂಡವಿಯಾ ಅವರು ನಡೆಸಿದ ಪರಿಶೀಲನಾ ಸಭೆಯ ನಂತರ ಪೌಲ್ ಈ ಹೇಳಿಕೆಗಳನ್ನು ನೀಡಿದ್ದಾರೆ. ಕೋವಿಡ್ ಇನ್ನೂ ಮುಗಿದಿಲ್ಲ. ಎಲ್ಲರು ಎಚ್ಚರದಿಂದ ಇರುವಂತೆ ಮತ್ತು ಕಣ್ಗಾವಲು ಬಲಪಡಿಸುವಂತೆ ಸೂಚಿಸಿದ್ದೇನೆ. ಯಾವುದೇ ಪರಿಸ್ಥಿತಿಯನ್ನು ನಿಭಾಯಿಸಲು ನಾವು ಸಿದ್ಧರಿದ್ದೇವೆ ಎಂದು ಮಾಂಡವಿಯಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಆರೋಗ್ಯ ಕಾರ್ಯದರ್ಶಿಗಳು, ಔಷಧೀಯ ಇಲಾಖೆ, ಜೈವಿಕ ತಂತ್ರಜ್ಞಾನ ಇಲಾಖೆ, ಆಯುಷ್, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಹಾನಿರ್ದೇಶಕ ರಾಜೀವ್ ಬಹ್ಲ್, ಪೌಲ್ ಮತ್ತು ಇಮ್ಯುನೈಸೇಶನ್ ಕುರಿತಾದ ರಾಷ್ಟಿçÃಯ ತಾಂತ್ರಿಕ ಸಲಹಾ ಗುಂಪು (ಎನ್‌ಟಿಎಜಿಐ) ಅಧ್ಯಕ್ಷ ಡಾ. ಎನ್.ಕೆ. ಅರೋರಾ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಿದ್ದರು. ಜಪಾನ್, ಅಮೆರಿಕ, ರಿಪಬ್ಲಿಕ್ ಆಫ್ ಕೊರಿಯಾ, ಬ್ರೆಜಿಲ್ ಮತ್ತು ಚೀನಾದಲ್ಲಿ ಪ್ರಕರಣಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು, ಹೊಸ ರೂಪಾಂತರಗಳನ್ನು ಟ್ರ‍್ಯಾಕ್ ಮಾಡಲು ವೈರಾಣುವಿನ ವಂಶವಾಹಿಗಳ ಸಂರಚನೆಯ ವಿಶ್ಲೇಷಣೆಗಾಗಿ (ಜೀನೋಮ್ ಸೀಕ್ವೆ ನ್ಸಿಂಗ್‌ಗೆ) ಕ್ರಮವನ್ನು ಹೆಚ್ಚಿಸುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯವು ಮಂಗಳವಾರ ಸೂಚನೆ ನೀಡಿದೆ. ಈ ಕುರಿತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಇಂತಹ ಕ್ರಮವು ದೇಶದಲ್ಲಿ ಪ್ರಸಾರವಾಗುತ್ತಿರುವ ಕೊರೊನಾ ವೈರಸ್ ಹೊಸ ರೂಪಾಂತರಗಳನ್ನು ಸಮಯೋಚಿತವಾಗಿ ಪತ್ತೆಹಚ್ಚಲು ಅನುವು ಮಾಡಿಕೊಡುತ್ತದೆ ಮತ್ತು ಅಗತ್ಯ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.
ಕೊರೊನಾ ರೂಪಾಂತರಿ ಭಾರತದಲ್ಲಿ ಪತ್ತೆ
ನವದೆಹಲಿ, ಡಿ. ೨೧: ಸದ್ಯ ಚೀನಾದಲ್ಲಿ ಅಬ್ಬರಿಸುತ್ತಿರುವ ಮಹಾಮಾರಿ ಕೊರೊನಾ ವೈರಸ್‌ನ ಹೊಸ ರೂಪಾಂತರಿ ಓಮಿಕ್ರಾನ್ ಉಪ ತಳಿ ಬಿಎಫ್. ೭ ವೈರಸ್ ಭಾರತದಲ್ಲೂ ಪತ್ತೆಯಾಗಿದ್ದು, ಮೂರು ಪ್ರಕರಣಗಳು ವರದಿಯಾಗಿವೆ. ಚೀನಾದ ಪ್ರಸ್ತುತ ಕೋವಿಡ್ ಪ್ರಕರಣಗಳ ಉಲ್ಬಣಕ್ಕೆ ಕಾರಣವಾಗಿರುವ ಬಿಎಫ್. ೭ನ ಮೊದಲ ಪ್ರಕರಣ ಕಳೆದ ಅಕ್ಟೋಬರ್‌ನಲ್ಲಿ ಗುಜರಾತ್‌ನ ಬಯೋಟೆಕ್ನಾಲಜಿ ರಿಸರ್ಚ್ ಸೆಂಟರ್‌ನಲ್ಲಿ ಪತ್ತೆಯಾಗಿತ್ತು ಎಂದು ಸರ್ಕಾರದ ಅಧಿಕೃತ ಮೂಲಗಳು ತಿಳಿಸಿವೆ. ಇಲ್ಲಿಯವರೆಗೆ, ಗುಜರಾತ್‌ನಿಂದ ಎರಡು ಪ್ರಕರಣಗಳು ವರದಿಯಾಗಿದ್ದು, ಒಡಿಶಾದಿಂದ ಒಂದು ಪ್ರಕರಣ ವರದಿಯಾಗಿದೆ ಎಂದು ಅವರು ಹೇಳಿದ್ದಾರೆ.
ಕೋವಿಡ್ ತಡೆಗೆ ಕ್ರಮ - ಡಾ. ಸುಧಾಕರ್
ಬೆಳಗಾವಿ, ಡಿ. ೨೧: ಕೋವಿಡ್‌ನಲ್ಲಿ ಹೊಸ ರೂಪಾಂತರಿ ವೈರಸ್‌ಗಳು ಕಂಡುಬರುತ್ತಿರುವುದರಿAದ ಎಲ್ಲಾ ರೋಗಿಗಳ ಮಾದರಿಗಳನ್ನು ‘ಜಿನೋಮ್ ಸೀಕ್ವೆನ್ಸಿಂಗ್’ಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಅದಕ್ಕಾಗಿ ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚೀನಾ, ಜಪಾನ್ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್‌ನ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಚೀನಾದಲ್ಲಿ ಆಸ್ಪತ್ರೆ ದಾಖಲಾತಿ ಕೂಡ ಹೆಚ್ಚಾಗುತ್ತಿದೆ. ಆದ್ದರಿಂದ ಲಸಿಕೆಯ ಮೂರನೇ ಡೋಸ್ ಪಡೆಯಲು ಆದ್ಯತೆ ನೀಡಬೇಕಿದೆ. ಹೊಸದಾಗಿ ಸೋಂಕಿಗೊಳಗಾಗುವವರ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸ್ ಪರೀಕ್ಷೆಗೆ ನೀಡಲು ಕೇಂದ್ರ ಸರ್ಕಾರದಿಂದ ಸೂಚನೆ ಬಂದಿದೆ. ಇದಕ್ಕೆ ಈಗಾಗಲೇ ಕ್ರಮ ವಹಿಸಲಾಗಿದೆ. ಹಾಗೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಸಿ ಕೆಲ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಹೆದ್ದಾರಿಗೆ ಕಾವೇರಿ ಹೆಸರಿಡಲು ಮನವಿ
ನವದೆಹಲಿ, ಡಿ. ೨೧: ಮೈಸೂರು ಬೆಂಗಳೂರು ದಶಪಥ ಎಕ್ಸ್ಪ್ರೆಸ್ ಹೈವೇಗೆ ಕಾವೇರಿ ಎಕ್ಸ್ಪ್ರೆಸ್ ವೇ ಎಂದು ಹೆಸರಿಡಲು ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ. ಮುಕ್ತಾಯದ ಹಂತದಲ್ಲಿರುವ ಮೈಸೂರು ಬೆಂಗಳೂರು ನಡುವಿನ ೧೧೯ ಕಿಲೋಮೀಟರ್ ಅಂತರದ ದಶಪಥ ಹೆದ್ದಾರಿಗೆ ಕಾವೇರಿ ಹೆಸರನ್ನು ಇಡುವಂತೆ ಪ್ರತಾಪ್ ಸಿಂಹ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರಿಗೆ ನವದೆಹಲಿಯಲ್ಲಿ ಮನವಿ ಸಲ್ಲಿಸಿದರು. ಕೊಡಗಿನ ತಲಕಾವೇರಿಯಲ್ಲಿ ಜನಿಸಿ ಕರ್ನಾಟಕದ ಜೀವನದಿ ಎನಿಸಿರುವ ಕಾವೇರಿಯೊಂದಿಗೆ ಕೊಡಗು-ಮೈಸೂರು ಮಂಡ್ಯ ಮತ್ತು ಬೆಂಗಳೂರು ಜನತೆಗೆ ಭಾವನಾತ್ಮಕ ಸಂಬAಧವಿದೆ. ಪಶ್ಚಿಮ ಘಟ್ಟದಲ್ಲಿ ಉಗಮಿಸುವ ಕಾವೇರಿ ಎಂಬ ಪವಿತ್ರ ಹೆಸರನ್ನೇ ಹೆದ್ದಾರಿಗೆ ಇಡುವುದು ಅತ್ಯಂತ ಸೂಕ್ತ ಎಂದು ಪ್ರತಾಪ್ ಸಿಂಹ ತಮ್ಮ ಮನವಿಯಲ್ಲಿ ಉಲ್ಲೇಖಿ ಸಿದ್ದಾರೆ. ಕಾವೇರಿ ಎಕ್ಸ್ಪ್ರೆಸ್ ವೇ ಹೆಸರಿಗೆ ಸಚಿವ ನಿತಿನ್ ಗಡ್ಕರಿ ಸಕಾ ರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ದರ್ಗಾದ ಒಂದು ಭಾಗ ತೆರವು-ಉದ್ವಿಗ್ನ ಪರಿಸ್ಥಿತಿ
ಹುಬ್ಬಳ್ಳಿ, ಡಿ. ೨೧: ಹುಬ್ಬಳ್ಳಿಯ ಬೈರಿದೇವರಕೊಪ್ಪ ದರ್ಗಾ ತೆರವು ಕಾರ್ಯಾಚರಣೆ ಮುಸ್ಲಿಂ ಸಮುದಾಯವನ್ನು ಕೆರಳಿಸಿದ್ದು ಸದ್ಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಸೆಕ್ಷನ್ ೧೪೪ ಹೇರಲಾಗಿದೆ. ನಗರದ ಬೈರಿ ದೇವರ ಕೊಪ್ಪದಲ್ಲಿರುವ ಹಜರತ್ ಸೈಯದ್ ಮಹಮೂದ್ ಶಾ ಖಾದ್ರಿ ದರ್ಗಾದ ಒಂದು ಭಾಗವನ್ನು ಕೆಡವಲಾಗುತ್ತಿದ್ದು, ನಗರದಲ್ಲಿ ಇಂದು ಉದ್ವಿಗ್ನ ವಾತಾವರಣ ಉಂಟಾಗಿದೆ. ದರ್ಗಾ ಹಾಗೂ ಕೆಲವು ವಾಣಿಜ್ಯ ಮಳಿಗೆಗಳ ಕಟ್ಟಡಗಳ ತೆರವು ಕಾರ್ಯಾಚರಣೆ ಬೆಳ್ಳಂಬೆಳಿಗ್ಗೆ ಆರಂಭವಾಯಿತು. ರಸ್ತೆ ಅಗಲೀಕರಣ ಹಿನ್ನೆಲೆ ಹಜರತ್ ಸೈಯದ್ ಮಹಮೂದ್ ಶಾ ಖಾದ್ರಿ ದರ್ಗಾದ ಒಂದು ಭಾಗವನ್ನು ತೆರವುಗೊಳಿಸಲಾಗುತ್ತಿದೆ. ಅಭಿವೃದ್ಧಿ ಕಾಮಗಾರಿಗಾಗಿ ದರ್ಗಾದ ಒಂದು ಭಾಗವನ್ನು ಕೆಡವಲು ಸ್ಥಳೀಯ ಮಹಾನಗರ ಪಾಲಿಕೆ ನಿರ್ಧರಿಸಿದ್ದು, ಹುಬ್ಬಳ್ಳಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಹುಬ್ಬಳ್ಳಿ ಮತ್ತು ಧಾರವಾಡ ನಗರಗಳಲ್ಲಿ ಸೆಕ್ಷನ್ ೧೪೪ ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಭೂಕಂದಾಯ ತಿದ್ದುಪಡಿ ವಿಧೇಯಕ ಮಂಡನೆ
ಬೆಳಗಾವಿ, ಡಿ. ೨೧: ಕರ್ನಾಟಕ ಭೂಕಂದಾಯ ಕಾಯ್ದೆಯ ಸೆಕ್ಷನ್ ೯೫ ಮತ್ತು ೯೬ಕ್ಕೆ ತಿದ್ದುಪಡಿ ತರುವ ಮೂಲಕ ಕೃಷಿಯೇತರ ಉದ್ದೇಶಗಳಿಗಾಗಿ ಭೂ ಪರಿವರ್ತನೆ ಪ್ರಕ್ರಿಯೆಯನ್ನು ಸರಳಗೊಳಿಸುವ ಉದ್ದೇಶದಿಂದ ಕರ್ನಾಟಕ ಭೂಕಂದಾಯ (ಎರಡನೇ ತಿದ್ದುಪಡಿ) ವಿಧೇಯಕ ೧೯೬೪ನ್ನು ಕಂದಾಯ ಸಚಿವ ಆರ್. ಅಶೋಕ ವಿಧಾನಸಭೆಯಲ್ಲಿ ಮಂಡಿಸಿದರು. ಈ ತಿದ್ದುಪಡಿ ಯನ್ನು ತರುವುದು ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಗಳಿಗಾಗಿ ಪರಿವರ್ತಿಸಲು ಸಹಾಯ ಮಾಡುತ್ತದೆ. ಕಾಯಿದೆಯ ಸೆಕ್ಷನ್ ೯೫ ರ ಉಪ-ವಿಭಾಗ(೨)ನ್ನು ತಿದ್ದುಪಡಿ ಮಾಡಲು ಮಸೂದೆಯು ಪ್ರಸ್ತಾಪಿಸುತ್ತದೆ, ಕೃಷಿ ಭೂಮಿಯ ನಿವಾಸಿಗಳು ಅದನ್ನು ಸಂಪೂರ್ಣವಾಗಿ ಅಥವಾ ಅದರ ಭಾಗವನ್ನು ಬೇರೆ ಯಾವುದೇ ಉದ್ದೇಶಕ್ಕಾಗಿ ಬೇರೆಡೆಗೆ ತಿರುಗಿಸಲು ಬಯಸಿದರೆ, ಅವರು ಅರ್ಜಿಯೊಂದಿಗೆ ಜಿಲ್ಲಾಧಿಕಾರಿಗಳಿಗೆ ಅಫಿಡವಿಟ್‌ನ್ನು ಸಲ್ಲಿಸಬಹುದು. ಜಮೀನು ಪರಭಾರೆಯಾಗಿದೆ ಎಂದು ಪರಿಗಣಿಸಲಾಗಿದ್ದು, ಅರ್ಜಿ ಸ್ವೀಕರಿಸಿದ ಏಳು ದಿನಗಳಲ್ಲಿ ಡಿಸಿ ಅನುಮೋದನೆ ನೀಡಲಿದ್ದಾರೆ.