ಮಡಿಕೇರಿ, ಡಿ. ೨೧: ಕೊಡಗು ಜಿಲ್ಲಾಡಳಿತ, ಕೊಡಗು ಜಿಲ್ಲಾ ಸ್ವೀಪ್ ಸಮಿತಿ, ಗೋಣಿಕೊಪ್ಪಲು ಕಾವೇರಿ ಕಾಲೇಜು, ಎನ್ಸಿಸಿ ಘಟಕ ಮತ್ತು ವೀರಾಜಪೇಟೆ ಕೊಡಗು ದಂತ ಮಹಾವಿದ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ತಾ. ೨೩ ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಗಾಂಧಿ ಮೈದಾನದಲ್ಲಿ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ದೊರೆಯಲಿದೆ. ಬಳಿಕ ಬೆಳಿಗ್ಗೆ ೧೧.೩೦ ಗಂಟೆಗೆ ಮೂರ್ನಾಡು, ನಂತರ ಮಧ್ಯಾಹ್ನ ೧೨.೩೦ ಗಂಟೆಗೆ ವೀರಾಜಪೇಟೆಗೆ ತೆರಳಿ ಮತದಾನ ಜಾಗೃತಿ ಅಭಿಯಾನ ನಡೆಯಲಿದೆ.
ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ನಗರದ ಗಾಂಧಿ ಮೈದಾನದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಜಿ.ಪಂ. ಸಿಇಒ ಡಾ. ಎಸ್. ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ. ಅಯ್ಯಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ನಂಜುAಡೇಗೌಡ, ೧೯ ಕರ್ನಾಟಕ ಬೆಟಾಲಿಯನ್ ಕಮಾಂಡಿAಗ್ ಆಫೀಸರ್ ಕರ್ನಲ್ ಜೆಫ್ರೀನ್ ಗಿಲ್ಬರ್ಟ್ ಅರ್ಹಾನ ಇತರರು ಪಾಲ್ಗೊಳ್ಳಲಿದ್ದಾರೆ.