ಮಡಿಕೇರಿ, ಡಿ. ೨೧ : ಮಧ್ಯಪ್ರದೇಶ ಮತ್ತು ದೆಹಲಿಯಲ್ಲಿ ೨೦೨೩ ರ ಜನವರಿ, ೩೦ ರಿಂದ ಫೆಬ್ರವರಿ, ೧೧ ರವರೆಗೆ ನಡೆಯಲಿರುವ ಖೇಲೋ ಇಂಡಿಯಾ ಯೂತ್ ಗೆಮ್ಸ್ಗೆ ರಾಜ್ಯದ ಬಾಲಕಿಯರ ವಾಲಿಬಾಲ್ ತಂಡವನ್ನು ಕಳುಹಿಸಿಕೊಡಬೇಕಿದೆ. ಆ ನಿಟ್ಟಿನಲ್ಲಿ ರಾಜ್ಯದಿಂದ ವಾಲಿಬಾಲ್ ಬಾಲಕಿಯರ ತಂಡದ ಆಯ್ಕೆ ಪ್ರಕ್ರಿಯೆಯನ್ನು ತಾ. ೨೩ ರಂದು ಬೆಳಿಗ್ಗೆ ೯ ಗಂಟೆಗೆ ಶ್ರೀಕಂಠೀರವ ಕ್ರೀಡಾಂಗಣದ ವಾಲಿಬಾಲ್' ಅಂಕಣದಲ್ಲಿ ಕ್ರೀಡಾ ಇಲಾಖೆ ವತಿಯಿಂದ ನಡೆಯಲಿದೆ. ಈ ಆಯ್ಕೆ ಪ್ರಕ್ರಿಯೆಯಲ್ಲಿ ವಿವಿಧ ಜಿಲ್ಲೆಯ ವಾಲಿಬಾಲ್ ಕ್ರೀಡಾಪಟುಗಳು ಹಾಗೂ ಸ್ಥಳೀಯ ವಾಲಿಬಾಲ್ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಕೊಡಗಿನ ವಾಲಿಬಾಲ್ ಪಟುಗಳು ಶ್ರೀಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ವಾಲಿಬಾಲ್ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಸ್ಮಯಿ ಅವರು ತಿಳಿಸಿದ್ದಾರೆ.