ಮಡಿಕೇರಿ, ಡಿ. ೨೩: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಡೆಸುತ್ತಿರುವ ರಾಜ್ಯ ವಲಯದ ಕ್ರೀಡಾ ಶಾಲೆ-ಕ್ರೀಡಾ ನಿಲಯಗಳಿಗೆ ೨೦೨೩-೨೪ನೇ ಸಾಲಿಗೆ ೮ನೇ ತರಗತಿ ಹಾಗೂ ಪ್ರಥಮ ಪಿಯುಸಿಗೆ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆ ತಾ. ೨೮ ರಂದು ಮಡಿಕೇರಿ ತಾಲೂಕಿಗೆ ಮಡಿಕೇರಿ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ, ತಾ. ೨೯ ರಂದು ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕಿಗೆ ಕೂಡಿಗೆ ಸರ್ಕಾರಿ ಕ್ರೀಡಾ ಶಾಲಾ ಕ್ರೀಡಾಂಗಣದಲ್ಲಿ ಹಾಗೂ ತಾ. ೩೦ ರಂದು ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿಗೆ ಪೊನ್ನಂಪೇಟೆಯ ತಾಲೂಕು ಮಿನಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಹೆಚ್ಚಿನ ಮಾಹಿತಿಗೆ ೦೮೨೭೨-೨೨೮೯೮೫ ಮತ್ತು ೯೪೮೦೦೩೨೭೧೨ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಸ್ಮಯಿ ತಿಳಿಸಿದ್ದಾರೆ.